ಮಣಿಪಾಲದ ಹೆರ್ಗದಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಕೊಳೆತ ಮೃತದೇಹ ಪತ್ತೆ!

ಮಣಿಪಾಲದ ಹೆರ್ಗದಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಕೊಳೆತ ಮೃತದೇಹ ಪತ್ತೆ!

ಮಣಿಪಾಲ: ಗುರುತು ಹಿಡಿಯಲಾಗದಷ್ಟು ಕೊಳೆತಿರುವ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವು ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಹೆರ್ಗ ಗ್ರಾಮದ ಸಣ್ಣಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಭಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಪತ್ತೆಯಾಗಿದೆ.

ವ್ಯಕ್ತಿ ಮೃತಪಟ್ಟು 20 ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಇವರು ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಶವ ಕೊಳೆತಿರುವುದರಿಂದ ನೇಣು ಕುಣಿಕೆಯಲ್ಲಿ ಭಾರ ತಡೆಯಲಾಗದೆ ದೇಹದ ರುಂಡ ಬೆರ್ಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಮಣಿಪಾಲದ ಆಸ್ಪತ್ರೆಯ ಶವ ಪರೀಕ್ಷಾ ಘಟಕಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು. ಮೃತ ವ್ಯಕ್ತಿಯ ವಾರಸುದಾರರು ಮಣಿಪಾಲ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Ads on article

Advertise in articles 1

advertising articles 2

Advertise under the article