ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಮೋದಿ ಸಂಪುಟ ಅನುಮೋದನೆ

ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಮೋದಿ ಸಂಪುಟ ಅನುಮೋದನೆ

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ (One Nation, One Election) ಮಸೂದೆಯನ್ನು ಗುರುವಾರ ಮೋದಿ ನೇತೃತ್ವದ ಸಂಪುಟ ಅನುಮೋದಿಸಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಿದೆ.

ಪ್ರಸ್ತುತ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು.

ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಗೀಕರಿಸಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ.

ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಹಂತಹಂತವಾಗಿ ಏಕಕಾಲಕ್ಕೆ ಚುನಾವಣೆ ನಡೆಸುವಂತೆ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.

Ads on article

Advertise in articles 1

advertising articles 2

Advertise under the article