ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; 16 ಸ್ಥಳಗಳಲ್ಲಿ ದಾಳಿ ನಡೆಸಿದ NIA
Thursday, December 5, 2024
ನವದೆಹಲಿ: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಕರ್ನಾಟಕದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ.
ಬೆಂಗಳೂರು, ಕೊಡಗು, ಚೆನ್ನೈ, ಎರ್ನಾಕುಲಂ ಸೇರಿದಂತೆ 16 ಕಡೆ ದಾಳಿ ದಾಳಿ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು 2022ರ ಜುಲೈನಲ್ಲಿ ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕೊಂದಿದ್ದರು.
ಆ.4 ರಂದು ತನಿಖೆಯನ್ನು ಕೈಗೆತ್ತಿಕೊಂಡ ಎನ್ಐಎ ಇದುವರೆಗೆ 19 ಜನರನ್ನು ಬಂಧಿಸಿದೆ. 21 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ. ಪರಾರಿಯಾಗಿರುವ ಇತರರನ್ನು ಪತ್ತೆಹಚ್ಚಲು ಸಂಸ್ಥೆ ತನ್ನ ಶೋಧವನ್ನು ಮುಂದುವರೆಸಿದೆ.