ಪ್ರತಿಭಟನೆ ವೇಳೆ ಬಿಜೆಪಿ ಸಂಸದ ಪ್ರತಾಪ್​ಗೆ ಗಾಯ; ರಾಹುಲ್​ ಗಾಂಧಿಯೇ ತಳ್ಳಿದ್ದು ಎಂದ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ!

ಪ್ರತಿಭಟನೆ ವೇಳೆ ಬಿಜೆಪಿ ಸಂಸದ ಪ್ರತಾಪ್​ಗೆ ಗಾಯ; ರಾಹುಲ್​ ಗಾಂಧಿಯೇ ತಳ್ಳಿದ್ದು ಎಂದ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ!

ದಿಲ್ಲಿ: ಬಿ.ಆರ್.ಅಂಬೇಡ್ಕರ್ ವಿಚಾರ ಕುರಿತು ಅಮಿತ್ ಶಾ ಹೇಳಿಕೆಯ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಸಂಸತ್ತಿನ ಆವರಣದಲ್ಲಿ ಧರಣಿ ನಡೆಸುತ್ತಿದ್ದ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯಗಳಾಗಿದ್ದು, ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಸತ್ತಿನ ಆವರಣದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಗಾಯಗೊಂಡಿದ್ದಾರೆ.

ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ತಳ್ಳಿದರು ಎಂದು ಸಾರಂಗಿ ಆರೋಪಿಸಿದ್ದಾರೆ. ಮತ್ತೊಂದೆಡೆ, ಬಿಜೆಪಿ ಸಂಸದರು ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸಂಸತ್ತಿನ ಮಕರ ದ್ವಾರದಲ್ಲಿ ತಳ್ಳಿದರು ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ನಾನು ನಿಂತಿದ್ದೆ ರಾಹುಲ್ ಗಾಂಧಿ ಬೇರೊಬ್ಬ ಸಂಸದರನ್ನು ತಳ್ಳಿದ್ದರು, ಆ ಸಂಸದ ನನ್ನ ಮೇಲೆ ಬಿದ್ದು ನಾನು ಕೆಳಗೆ ಬಿದ್ದೆ ಎಂದು ಪ್ರತಾಪ್ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article