ಉಚ್ಚಿಲದಲ್ಲಿ KSRTC ಬಸ್ ಡಿಕ್ಕಿ; ಪಾದಾಚಾರಿ ಸಾವು
Thursday, December 19, 2024
ಉಚ್ಚಿಲ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ಉಚ್ಚಿಲ ಪೇಟೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಶಿವಪ್ಪ ಪೂಜಾರಿ ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಉಚ್ಚಿಲದ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ಶಿವಪ್ಪ ಪೂಜಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, SDPI ಅಂಬ್ಯುಲೆನ್ಸ್'ನಲ್ಲಿ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲಾಯಿತು.
ಈ ವೇಳೆ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಶಿವಪ್ಪ ಪೂಜಾರಿ ಅವರನ್ನು ಸಾಮಾಜಿಕ ಕಾರ್ಯಕರ್ತ ಜಲಾಲುದ್ದೀನ್(ಜಲ್ಲು ಫ್ರೂಟ್ಸ್), ಸಾದಿಕ್ NH, SDPI ಅಂಬ್ಯುಲೆನ್ಸ್ ಚಾಲಕ ಹಮೀದ್, ಅಸೀಫ್ YC, ರಿಕ್ಷಾ ಚಾಲಕರಾದ ಅಶ್ರಫ್, ಹನೀಫ್, ಅಬ್ದುಲ್ಲಾ(ಕೋಳಿಯಂಗಡಿ) ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿದರು.