ಡಿ.10ರಂದು ಇಂದ್ರಾಳಿ ರುದ್ರಭೂಮಿಯಲ್ಲಿ "ಅಂತ್ಯ ಸಂಸ್ಕಾರ ಧಾಮ" ಲೋಕಾರ್ಪಣೆ
ಉಡುಪಿ: ಬೆಲ್ಪತ್ರೆ ಗಣೇಶ್ ನಾಯಕ್ ಮತ್ತು ಶೈಲಾ ನಾಯಕ್ ಮಣಿಪಾಲ ಇವರ ವೈವಾಹಿಕ ಸ್ವರ್ಣ ಮಹೋತ್ಸವ ವರ್ಷದ ಕೊಡುಗೆಯಾಗಿ ರೋಟರಿ ಕ್ಲಬ್ ಮಣಿಪಾಲ ಟೌನ್ ನೇತೃತ್ವದಲ್ಲಿ ಇಂದ್ರಾಳಿಯ ಹಿಂದೂ ರುದ್ರಭೂಮಿಯಲ್ಲಿ 15 ಲಕ್ಷ ರೂ. ಮೊತ್ತದಲ್ಲಿ ನಿರ್ಮಿಸಲಾದ ಕಟ್ಟಡ "ಅಂತ್ಯ ಸಂಸ್ಕಾರ ಧಾಮ" ಲೋಕಾರ್ಪಣೆ ಸಮಾರಂಭವು ಇದೇ ಡಿ.10ರಂದು ಬೆಳಿಗ್ಗೆ 11ಗಂಟೆಗೆ ನಡೆಯಲಿದೆ ಎಂದು ರೋಟರಿ ಕ್ಲಬ್ ಮಣಿಪಾಲ ಟೌನ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಸಚ್ಚಿದಾನಂದ ನಾಯಕ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ ಐಡಿ 3182 ಜಿಲ್ಲಾ ಗವರ್ನರ್ ದೇವಾನಂದ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ರೋಟರಿ ಕ್ಲಬ್ ಮಣಿಪಾಲ ಟೌನ್ ಅಧ್ಯಕ್ಷ ಡಾ. ಮನೋಜ್ ಕುಮಾರ್ ನಾಗಸಂಪಿಗೆ, ಕಾರ್ಯದರ್ಶಿ ನವೀನ್ ಕುಮಾರ್ ಕೊಡಮರ, ಟ್ರಸ್ಟ್ ಅಧ್ಯಕ್ಷ ಡಾ. ಸೇಸಪ್ಪ ಎ. ರೈ ಇದ್ದರು.