ಭಾರತದಲ್ಲಿ ಕಾಣಿಸಿಕೊಂಡ HMPV ವೈರಸ್; ಬೆಂಗಳೂರಿನಲ್ಲಿ ಇಬ್ಬರಲ್ಲಿ, ಗುಜರಾತ್ ನಲ್ಲಿ ಒಬ್ಬರು ಸೇರಿದಂತೆ ಮೂರು ಪ್ರಕರಣ ಪತ್ತೆ

ಭಾರತದಲ್ಲಿ ಕಾಣಿಸಿಕೊಂಡ HMPV ವೈರಸ್; ಬೆಂಗಳೂರಿನಲ್ಲಿ ಇಬ್ಬರಲ್ಲಿ, ಗುಜರಾತ್ ನಲ್ಲಿ ಒಬ್ಬರು ಸೇರಿದಂತೆ ಮೂರು ಪ್ರಕರಣ ಪತ್ತೆ

ಬೆಂಗಳೂರು: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಕರ್ನಾಟಕದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ನ ಎರಡು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಮೊದಲ ಪ್ರಕರಣವು ಬೆಂಗಳೂರಿನಲ್ಲಿ 3 ತಿಂಗಳ ಹೆಣ್ಣುಮಗುವಿನಲ್ಲಿ ಪತ್ತೆಯಾಗಿತ್ತು. ಬ್ರಾಂಕೋಪ್ನ್ಯುಮೋನಿಯಾದೊಂದಿಗೆ ಆಸ್ಪತ್ರೆಗೆ ದಾಖಲಾದ ನಂತರ HMPV ರೋಗನಿರ್ಣಯ ಮಾಡಲಾಯಿತು. ಸಚಿವಾಲಯದ ಮಾಹಿತಿ ಪ್ರಕಾರ ಆಕೆಯನ್ನು ಡಿಸ್ಚಾರ್ಜ್ ಮಾಡಲಾಗಿದೆ. ಎರಡನೇ ಪ್ರಕರಣವು 8 ತಿಂಗಳ ಗಂಡು ಶಿಶುವಿನಲ್ಲಿ ಪತ್ತೆಯಾಗಿದ್ದು ಪ್ರಸ್ತುತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.

ಎರಡು ಶಿಶುಗಳಿಗೂ ಯಾವುದೇ ಅಂತರರಾಷ್ಟ್ರೀಯ ಪ್ರಯಾಣದ ಇತಿಹಾಸವಿಲ್ಲ ಎಂದು ICMR ದೃಢಪಡಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಮಧ್ಯಾಹ್ನ ಆರೋಗ್ಯ ಆಯುಕ್ತ ಶಿವಕುಮಾರ್ ಕೆಬಿ ಮತ್ತು ಪ್ರಧಾನ ಆರೋಗ್ಯ ಕಾರ್ಯದರ್ಶಿ ಹರ್ಷಗುಪ್ತ ಸೇರಿದಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯವು ಕರ್ನಾಟಕದಲ್ಲಿ ಎರಡು HMPV (ಹ್ಯೂಮನ್ ಮೆಟಾಪ್ನ್ಯೂಮೋವೈರಸ್) ಪ್ರಕರಣಗಳನ್ನು ದೃಢಪಡಿಸಿದ ಕೆಲವೇ ಗಂಟೆಗಳ ನಂತರ, ಗುಜರಾತ್‌ನಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಎಬಿಪಿ ಅಸ್ಮಿತಾ ಪ್ರಕಾರ, ಗುಜರಾತ್‌ನಲ್ಲಿ ಇದು ಮೊದಲ ಎಚ್‌ಎಂಪಿವಿ ಪ್ರಕರಣವಾಗಿದೆ. ಸುಮಾರು 2 ವರ್ಷ ವಯಸ್ಸಿನ ಮಗುವಿನಲ್ಲಿ HMPV ವೈರಸ್ ಪತ್ತೆಯಾಗಿದೆ. ರೋಗಿಯನ್ನು ಅಹಮದಾಬಾದ್‌ನ ಚಂದ್‌ಖೇಡಾ ಪ್ರದೇಶದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚುವರಿಯಾಗಿ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಮತ್ತು ಇಂಟಿಗ್ರೇಟೆಡ್ ಡಿಸೀಸ್ ಸರ್ವೆಲೆನ್ಸ್ ಪ್ರೋಗ್ರಾಂ (IDSP) ಮಾಹಿತಿ ಪ್ರಕಾರ , ಇನ್ಫ್ಲುಯೆನ್ಸ ತರಹದ ಅನಾರೋಗ್ಯ (ILI) ಅಥವಾ ತೀವ್ರ ಉಸಿರಾಟದ ಕಾಯಿಲೆ (SARI) ಪ್ರಕರಣಗಳಲ್ಲಿ ಯಾವುದೇ ಅಸಾಮಾನ್ಯ ಏರಿಕೆ ಕಂಡುಬಂದಿಲ್ಲ ಎಂದು ಅದು ಹೇಳಿದೆ.

ಇಲಾಖೆಯು ಮಾಡಬೇಕಾದ ಮತ್ತು ಮಾಡಬಾರದಂತಹ ಮೂಲ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ ಮತ್ತು ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ರಾಜ್ಯವು ಸನ್ನದ್ಧವಾಗಿದೆ ಎಂದು ಭರವಸೆ ನೀಡಿದೆ.

ಮಾಡಬೇಕಾದ್ದು ಮತ್ತು ಮಾಡಬಾರದ್ದು...

ಸ್ವಯಂ-ಚಿಕಿತ್ಸೆ ಮಾಡಬೇಡಿ.

ನೀವು ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳಿ.

ನಿಮ್ಮ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಅಥವಾ ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್‌ನಿಂದ ತೊಳೆಯಿರಿ.

ನೀವು ಅಸ್ವಸ್ಥರಾಗಿದ್ದರೆ ಕಿಕ್ಕಿರಿದ ಸ್ಥಳಗಳನ್ನು ತಪ್ಪಿಸಿ ಮತ್ತು ಸಂಪರ್ಕವನ್ನು ಮಿತಿಗೊಳಿಸಿ.

ಆಗಾಗ್ಗೆ ಕಣ್ಣು, ಮೂಗು ಮತ್ತು ಬಾಯಿಯನ್ನು ಮುಟ್ಟಬೇಡಿ.

ನೀವು ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಮತ್ತು ಟಿಶ್ಯೂ ಪೇಪರ್ ಅನ್ನು ಮರುಬಳಕೆ ಮಾಡಬೇಡಿ.

Ads on article

Advertise in articles 1

advertising articles 2

Advertise under the article