ಹಾಡಹಗಲೇ ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ; ಇಬ್ಬರು ಸಾವು; 93 ಲಕ್ಷ ರೂ ದರೋಡೆ

ಹಾಡಹಗಲೇ ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ; ಇಬ್ಬರು ಸಾವು; 93 ಲಕ್ಷ ರೂ ದರೋಡೆ

ಬೀದರ್: ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ಗುರುವಾರ ನಡೆದಿದೆ.

ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಕಣ್ಣಿಗೆ ಖಾರದ‌ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. ಗುಂಡಿನ ದಾಳಿ ಪರಿಣಾಮ ಇಬ್ಬರು ಎಸ್‌ಬಿಐ ಬ್ಯಾಂಕ್ ಸಿಬ್ಬಂದಿಗಳು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಬೆಳಿಗ್ಗೆ 11.30 ಕ್ಕೆ ಜನನಿಬಿಡ ಶಿವಾಜಿ ಚೌಕ್‌ನಲ್ಲಿರುವ ಎಸ್​ಬಿಐ ಬ್ಯಾಂಕ್ ಎಟಿಎಂಗೆ ಹಣವನ್ನು ತುಂಬಿಸಲು ಭದ್ರತಾ​ ಸಿಬ್ಬಂದಿ ಜಿಎಸ್'ಸಿ ವಾಹನದಲ್ಲಿ ಲಕ್ಷಾಂತರ ಹಣವನ್ನು ತೆಗೆದುಕೊಂಡು ಬಂದಿದ್ದರು. ಇನ್ನೇನು ಎಟಿಎಂಗೆ ಹಣ ಹಾಕಬೇಕು ಎನ್ನುವಷ್ಟರಲ್ಲಿ ಸ್ಥಳಕ್ಕೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಏಕಾಏಕಿ ಎಂಟು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಸಿಬ್ಬಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಮತ್ತೋರ್ವ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಖರೀಮರು 93 ಲಕ್ಷ ರೂ. ಇದ್ದ ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸ್ಥಳೀಯರ ಫೋನ್​ನಲ್ಲಿ ಸೆರೆಯಾಗಿದೆ. ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಒಬ್ಬ ಮೃತ ಭದ್ರತಾ ಸಿಬ್ಬಂದಿಯನ್ನು ಪೊಲೀಸರು ಗಿರಿ ವೆಂಕಟೇಶ್ ಎಂದು ಗುರುತಿಸಿದ್ದಾರೆ.

Ads on article

Advertise in articles 1

advertising articles 2

Advertise under the article