ಬೆಂಗಳೂರು ಸೇರಿ ರಾಜ್ಯದ 8 ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು ಸೇರಿ ರಾಜ್ಯದ 8 ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಠರಿಗೆ ಬಿಸಿ ಮುಟ್ಟಿಸಿದ್ದಾರೆ.

ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ದಾಳಿ ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೆಲೆ, ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್ ನಿವಾಸದ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ.

ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ ಮನೆ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್​ಟಿಒ ಅಧಿಕಾರಿ ಎಸ್.ರಾಜು ಮನೆ ಮೇಲೆಯೂ ದಾಳಿ ನಡೆದಿದೆ. ಗದಗ-ಬೆಟಗೇರಿ ನಗರಸಭೆ ಎಇಇ ಆರ್​ಎಚ್ ಹುಚ್ಚೇಶ್ ಮನೆ ಮೇಲೆ ದಾಳಿ‌‌ ನಡೆದಿದೆ. ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮನೆ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಮನೆ ಮೇಲೆಯೂ ದಾಳಿ ನಡೆದಿದೆ.

ಗದಗ ಬೆಟಗೇರಿ ನಗರಸಭೆಯ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್​ಗೆ ಸೇರಿದ ಮನೆ ಮತ್ತು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಒಟ್ಟು ಐದು ಕಡೆ ದಾಳಿ ನಡೆದಿದೆ.

ಹುಚ್ಚೇಶ್ ಬಂಡಿವಡ್ಡರ್ ಅವರ​ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ. ಲೋಕಾಯುಕ್ತ ಎಸ್​ಪಿ ಹನಂಮತರಾಯ್, ಡಿವೈಎಸ್​ಪಿ ವಿಜಯ್ ಬಿರಾದಾರ್, ಪಿಎಸ್​ಐ ಎಸ್ ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article