ಮದುವೆಯಾಗುವಂತೆ ಪೀಡಿಸುತ್ತಿದ್ದ ಗೆಳತಿಯನ್ನು ಕೊಂದು ಶವವನ್ನ 8 ತಿಂಗಳು ಫ್ರಿಡ್ಜ್‌ನಲ್ಲಿಟ್ಟಿದ್ದ ವ್ಯಕ್ತಿ!
ಭೋಪಾಲ್: ತನ್ನನ್ನು ಮದುವೆಯಾಗುವಂತೆ ಪದೇ ಪದೇ ಪೀಡಿಸುತ್ತಿದ್ದಕ್ಕೆ ವಿವಾಹಿತನೊಬ್ಬ ಲಿವಿನ್ ಗೆಳತಿಯನ್ನು ಕೊಂದು ಸುಮಾರು 8 ತಿಂಗಳ ಕಾಲ ಶವವನ್ನು ಫ್ರಿಡ್ಜ್‌ನಲ್ಲಿಟ್ಟಿದ್ದ ಘಟನೆ ಮಧ್ಯಪ್ರದೇಶದ ದೇವಾಸ್‌ನಲ್ಲಿ ನಡೆದಿದೆ.
ಆರೋಪಿಯನ್ನು ಸಂಜಯ್ ಪಾಟಿದಾರ್ ಹಾಗೂ ಕೊಲೆಯಾದ ಲಿವ್ ಇನ್ ಗೆಳತಿಯನ್ನ ಪಿಂಕಿ ಪ್ರಜಾಪತಿ ಎಂದು ಗುರುತಿಸಲಾಗಿದೆ. ಪಾಟಿದಾರ್ ಬಾಡಿಗೆಗೆ ಪಡೆದಿದ್ದ ಮನೆಯ ಫ್ರಿಡ್ಜ್‌ನಲ್ಲಿ ಆಭರಣ ಧರಿಸಿ, ಸೀರೆಯುಟ್ಟ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ಜೂನ್ ತಿಂಗಳಲ್ಲೇ ಕೊಲೆ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಜ್ಜಯಿನಿ ನಿವಾಸಿಯಾಗಿದ್ದ ಪಾಟಿದಾರ್ ಕಳೆದ 5 ವರ್ಷಗಳಿಂದ ಪಿಂಕಿಯೊಂದಿಗೆ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ. ಈ ವೇಳೆ ಇಬ್ಬರ ನಡುವೆ ದೈಹಿಕ ಸಂಪರ್ಕವೂ ಬೆಳೆದಿತ್ತು. ಇದರಿಂದ ಪಿಂಕಿ ಪದೇ ಪದೇ ತನ್ನನ್ನು ಮದುವೆಯಾಗುವಂತೆ ಪಾಟಿದಾರ್‌ಗೆ ಒತ್ತಡ ಹೇರುತ್ತಿದ್ದಳು. ಇದರಿಂದ ಸಿಟ್ಟಿಗೆದ್ದ ಸಂಜಯ್ ತನ್ನ ಸ್ನೇಹಿತನೊಂದಿಗೆ ಸೇರಿ ಪಿಂಕಿ ಕೊಲ್ಲಲ್ಲು ಸ್ಕೆಚ್ ಹಾಕಿದ್ದ ಎಂದು ಮೂಲಗಳು ತಿಳಿಸಿವೆ.
ಸುಮಾರು 30 ವರ್ಷದ ಪಿಂಕಿಯನ್ನು 2024ರ ಜೂನ್‌ನಲ್ಲಿ ಹತ್ಯೆ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. 2023ರಲ್ಲಿ ಸಂಜಯ್ ಧೀರೇಂದ್ರ ಶ್ರೀವಾಸ್ತವ ಎಂಬವರ ಮನೆ ಬಾಡಿಗೆ ಪಡೆದಿದ್ದ ಸಂಜಯ್ ಕಳೆದ ಜೂನ್ ತಿಂಗಳಲ್ಲಿ ಆಕೆಯನ್ನ ಕೊಲೆ ಮಾಡಿದ್ದಾನೆ. ಬಳಿಕ ಮನೆ ಖಾಲಿ ಮಾಡಿದ್ದಾನೆ. ಇದಾದ ಕೆಲ ದಿನಗಳ ನಂತರ ಶವ ಕೊಳೆತು ದುರ್ವಾಸನೆ ಬರಲಾರಂಭಿಸಿದೆ. ಈ ಬಗ್ಗೆ ಸ್ಥಳೀಯರು ಮನೆ ಮಾಲೀಕರಿಗೆ ತಿಳಿಸಿದ್ದಾರೆ. ಬಾಗಿಲು ತೆರೆದು ನೋಡಿದಾಗ ಫ್ರಿಡ್ಜ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕೂಡಲೇ ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ದೇವಾಸ್ ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಟ್ ತಿಳಿಸಿದ್ದಾರೆ.
2022ರ ಮೇ ತಿಂಗಳಲ್ಲಿ ದೆಹಲಿಯ ಮೆಹ್ರೌಲಿಯಲ್ಲಿ ತನ್ನ ಲಿವ್ ಇನ್ ಗೆಳೆಯ ಶ್ರದ್ಧಾ ವಾಕರ್ ಎಂಬಾಕೆಯನ್ನ ಕತ್ತುಹಿಸುಕಿ ಕೊಲೆ ಮಾಡಿದ್ದ. ಬಳಿಕ ದೇಹವನ್ನು ತುಂಡು-ತುಂಡಾಗಿ ಕತ್ತರಿಸಿ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎಸೆದು ಬಂದಿದೆ. ಈ ಘಟನೆ ಇಡೀ ದೆಹಲಿ ಜನರನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಇದೀಗ ಅದೇ ಮಾದರಿಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.