ಉಡುಪಿ: ಶ್ರೀರಾಮ್ ಫೈನಾನ್ಸ್ ವತಿಯಿಂದ ಒಂದು ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ: ಶ್ರೀರಾಮ್ ಫೈನಾನ್ಸ್ ವತಿಯಿಂದ ಒಂದು ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ: ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ಉಡುಪಿಯ ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. 

ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಒಂದು ಲಕ್ಷ ರೂ.ಯಲ್ಲಿ‌ ಆರಂಭಿಸಿದ ಶ್ರೀರಾಮ್ ಫೈನಾನ್ಸ್ ಸಂಸ್ಥೆ ಇಂದು ಎರಡೂವರೆ ಲಕ್ಷ ಕೋಟಿಗೂ ಅಧಿಕ ವಹಿವಾಟು ನಡೆಸುತ್ತಿದೆ. ಶ್ರೀರಾಮ ಫೈನಾನ್ಸ್ ನ ಸಂಸ್ಥಾಪಕ ತ್ಯಾಗರಾಜನ್ ಅವರ ಜೀವನ ಮೌಲ್ಯ, ಆದರ್ಶಗಳನ್ನು ಇಂದಿನ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ತ್ಯಾಗರಾಜನ್ ಅವರ ಬಗ್ಗೆ ಆಳವಾದ ಅಧ್ಯಯನ ಮಾಡಬೇಕು. ಶ್ರೀರಾಮ್ ಫೈನಾನ್ಸ್ ನೀಡುವ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳು ಓದಿಗಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಶ್ರೀರಾಮ್ ಫೈನಾನ್ಸ್ ನ ಝೋನಲ್ ಬಿಸಿನೆಸ್ ಹೆಡ್ ಶರಶ್ಚಂದ್ರ ಭಟ್ ಕಾಕುಂಜೆ ಅಧ್ಯಕ್ಷತೆ ವಹಿಸಿದ್ದರು. 

ಕಾಂಚನ್ ಮೋಟಾರ್ಸ್ ನ ವ್ಯವಸ್ಥಾಪಕ ನಿರ್ದೇಶಕ ಪ್ರಸಾದ್ ರಾಜ್ ಕಾಂಚನ್, ಉಡುಪಿ ತಹಶೀಲ್ದಾರ್ ಪಿ.ಆರ್. ಗುರುರಾಜ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಪ್ರಾಧ್ಯಾಪಕಿ ಡಾ.ನಿಕೇತನ, ಹೆಗ್ಡೆ ಮೋಟಾರ್ ಟ್ರಾನ್ಸ್ ಪೋರ್ಟ್ ಮಾಲೀಕ ಗಣನಾಥ ಹೆಗ್ಡೆ, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಬಿಲ್ಲವ ಮುಖಂಡ ಮಾಧವ ಬನ್ನಂಜೆ, ಶ್ರೀರಾಮ್ ಫೈನಾನ್ಸ್ ನ ಕಾನೂನು ಸಲಹೆಗಾರ ಉಲ್ಲಾಸ್ ನಾಯಕ್, ಶ್ರೀರಾಮ್ ಫೈನಾನ್ಸ್ ನ ನಾಗರಾಜ್ ಬಿ., ಗಣಪತಿ ನಾಯಕ್, ದಿನೇಶ್ ನಾಯ್ಕ್, ಸುರೇಶ್ ಶೆಟ್ಟಿ, ಉಡುಪಿ ಶಾಖಾಧಿಕಾರಿ ಸಂದೀಪ್, ಕಾರ್ಕಳ ಶಾಖಾಧಿಕಾರಿ ವಿಕೇಶ್ ಸುವರ್ಣ, ಕುಂದಾಪುರ ಶಾಖಾಧಿಕಾರಿ ರಘು ಮಡಿವಾಳ ಉಪಸ್ಥಿತರಿದ್ದರು. ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಸಂಸ್ಥೆಯ ವಿಭಾಗೀಯ ಅಧಿಕಾರಿ ಸದಾಶಿವ ಅಮೀನ್ ಕಟ್ಟೆಗುಡ್ಡೆ ಸ್ವಾಗತಿಸಿದರು.


Ads on article

Advertise in articles 1

advertising articles 2

Advertise under the article