ಉಚ್ಚಿಲದಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು
Friday, January 10, 2025
ಉಚ್ಚಿಲ: ರಸ್ತೆ ದಾಟುತ್ತಿದ್ದ ವೃದ್ಧ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಚ್ಚಿಲದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72)ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಉಚ್ಚಿಲ ಪೇಟೆಯ ರಿಕ್ಷಾ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಶ್ರೀನಿವಾಸ ತೋಣಿತ್ತಾಯರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಈ ವೇಳೆ ಸ್ಥಳೀಯ ಯುವಕರ ತಂಡ ಮೃತದೇಹವನ್ನು ಉಚ್ಚಿಲ ಎಸ್ ಡಿಪಿ ಐ ಅಂಬುಲೆನ್ಸ್‌ನಲ್ಲಿ ಪಡುಬಿದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸುವಲ್ಲಿ ಸಹಕರಿಸಿತು.
ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.