ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ, ಜನವಿರೋಧಿ ನೀತಿ ವಿರುದ್ಧ ಆಕ್ರೋಶ; ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ, ಜನವಿರೋಧಿ ನೀತಿ ವಿರುದ್ಧ ಆಕ್ರೋಶ; ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ


ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ, ಜನವಿರೋಧಿ ನೀತಿ ಖಂಡಿಸಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರ ಬಿಜೆಪಿಯ ಹಿರಿಯ  ನಾಯಕರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದರು.





ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತಿತರ ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದರು. ಬೆಲೆ ಏರಿಕೆ ಮತ್ತಿತರ ವಿಷಯಗಳ ವಿರುದ್ಧ ಬುಧವಾರ ಪ್ರೀಢಂಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ ನಾಯಕರು ಗುರುವಾರ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಬೆಲೆ ಏರಿಕೆ, ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ. 4 ರಷ್ಟು ಮೀಸಲಾತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟ ಹಣ ವರ್ಗಾವಣೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ.





ಈ ಪ್ರಮುಖ ಮೂರು ವಿಚಾರಗಳನ್ನು ಜನರಿಗೆ ತಲುಪಿಸಲಾಗುವುದು, ರಾಜ್ಯದ ವಿವಿಧ ಕಡೆಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದರು.

ಏಪ್ರಿಲ್ 7 ರಿಂದ 'ಜನಾಕ್ರೋಶ ಯಾತ್ರೆ' ಆಯೋಜಿಸಲಾಗಿದೆ. ಈ ಯಾತ್ರೆಗೆ ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಲನೆ ನೀಡಲಿದ್ದಾರೆ.

ಮಾರ್ಚ್ 7ರಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ, ಏಪ್ರಿಲ್ 8 ಮಂಡ್ಯ ಮತ್ತು ಹಾಸನ ಏಪ್ರಿಲ್ 9 ರಂದು ಕೊಡಗು ಮತ್ತು ಮಂಗಳೂರು ಮತ್ತು ಏಪ್ರಿಲ್ 10 ರಂದು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಮೊದಲ ಹಂತ ಮುಗಿಯಲಿದೆ ಎಂದು ಬಿಜೆಪಿ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏಪ್ರಿಲ್ 13 ರಂದು ಎರಡನೇ ಹಂತದಲ್ಲಿ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಹೋರಾಟ ನಡೆಯಲಿದ್ದು, ಪ್ರತಿಜಿಲ್ಲೆಯಲ್ಲಿ ಎರಡರಿಂದ ಮೂರು ಕಿಲೋಮೀಟರ್ ಪಾದಯಾತ್ರೆ ಸಾಗಲಿದೆ ಎಂದು ಅವರು ತಿಳಿಸಿದರು.

Ads on article

Advertise in articles 1

advertising articles 2

Advertise under the article