ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಕಾರಿಗೆ ಐರಾವತ ಬಸ್ ಡಿಕ್ಕಿ;  ಒಂದೇ ಕುಟುಂಬದ ನಾಲ್ವರ ಸಾವು

ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಕಾರಿಗೆ ಐರಾವತ ಬಸ್ ಡಿಕ್ಕಿ; ಒಂದೇ ಕುಟುಂಬದ ನಾಲ್ವರ ಸಾವು



ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನ ಮಂಡ್ಯ ತೂಬಿನಕೆರೆ ಬಳಿ ಕಾರಿಗೆ ಐರಾವತ ಬಸ್ ಡಿಕ್ಕಿ ಹೊಡೆದಿದಿದ್ದು, ಈ ಭೀಕರ ಅಪಘಾತದಲ್ಲಿ ನಾಲ್ವರು ಬಲಿಯಾಗಿದ್ದಾರೆ. 

ಕಾರು ಮೈಸೂರು ಕಡೆಗೆ ಹೊರಟಿತ್ತು. ಈ ವೇಳೆ ಎಕ್ಸ್ಪ್ರೆಸ್‌ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲ ಉಂಟಾಗಿದ್ದು, ಮತ್ತೆ ಕಾರನ್ನು ಎಕ್ಸ್ಪ್ರೆಸ್ ವೇಗೆ ತಿರುಗಿಸಿದ್ದಾನೆ. ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
 
ಮೃತರೆಲ್ಲರು ಬೆಂಗಳೂರು ಜೆಪಿ ನಗರದಲ್ಲಿ ನೆಲೆಸಿದ್ದರು. ಮಾವನ ಅಂತ್ಯಸಂಸ್ಕಾರಕ್ಕೆ ಮೈಸೂರಿನ ಪಿರಿಯಾಪಟ್ಟಣಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.  ಮೃತರನ್ನು ಸತ್ಯಾನಂದ ರಾಜೇ ಆರಸ್ (51), ಅವರ ಪತ್ನಿ ನಿಶ್ಚಿತಾ (45), ಚಂದ್ರು (62), ಅವರ ಪತ್ನಿ ಸುವೇದಿನಿ ರಾಣಿ (50) ಎಂದು ಗುರುತಿಸಲಾಗಿದೆ. 

ಬಸ್​ ಗುದ್ದಿದ ರಭಸಕ್ಕೆ ಟಾಟಾ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇನ್ನು ಹೆದ್ದಾರಿ ಟ್ರಾಫಿಕ್​ ಉಂಟಾಗಿದ್ದು, ವಿಷಯ ತಿಳಿದು ಕೂಡಲೇ ಸ್ಥಳಕ್ಕೆ  ದಕ್ಷಿಣ ವಯಲ ಡಿಐಜಿಪಿ ಡಾ.ಎಂ.ಬಿ.ಬೋರಲಿಂಗಯ್ಯ ಹಾಗೂ ಮಂಡ್ಯ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಪಿರಿಯಾಪಟ್ಟಣ ತಾಲೂಕಿನ ಸಿಗೂರು ಗ್ರಾಮದಲ್ಲಿ ಸತ್ಯಾನಂದರಾಜೇ ಅರಸ್ ಅವರ ಮಾವ ತೀರಿ ಹೋಗಿದ್ದರು. ಹೀಗಾಗಿ ಅಂತ್ಯಕ್ರಿಯೆಗೆಂದು ಅರಸ್ ಕುಟುಂಬ ಕಾರಿನಲ್ಲಿ ಬೆಂಗಳೂರಿನಿಂದ ಪಿರಿಯಾಪಟ್ಟಣ ತಾಲೂಕಿನ ಸಿಗೂರು ಗ್ರಾಮಕ್ಕೆ ಹೋಗುತ್ತಿದ್ದರು.  ಈ ದುರ್ಘಟನೆ ಸಂಭವಿಸಿದೆ.  ಇನ್ನು ಕ್ರೇನ್ ಮೂಲಕ ಕಾರನ್ನು ಸೈಡಿಗೆ ಸರಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

KA 57, F 1721 ನಂಬರಿನ ಸಂಖ್ಯೆಯ ಐರಾತ ಬಸ್,  KA 09 MG 4263 ಟಾಟಾ ಪಂಚ್ ಕಾರಿಗೆ ಗುದ್ದಿದೆ. ವೇಗವಾಗಿ ಬರುತ್ತಿದ್ದ ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಕಾರಿನಲ್ಲೇ ಉಸಿರು ಚೆಲ್ಲಿದ್ದಾರೆ. ಇನ್ನು ಕಾರು ನೋಡದ ಸ್ಥಿತಿಯಲ್ಲಿದೆ. ಇನ್ನು ಬಸ್​ಗೆ ಮುಂಭಾಗ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿದೆ ಅಷ್ಟೇ.  
ಮೃತ ಸತ್ಯಾನಂದರಾಜೇ ಅರಸ್ ಹಾಗೂ ಚಂದ್ರರಾಜೇ ಅರಸ್ ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಚಂದ್ರರಾಜೇ ಅರಸ್ ಪತ್ನಿ ಸುವೇದಿನಿ ರಾಣಿ, ಸಹೋದರ ಸತ್ಯಾನಂದರಾಜೇ ಅರಸ್, ಪತ್ನಿ ನಿಶ್ಚಿತಾ ತೆರಳುತ್ತಿದ್ದರು.  ಚಂದ್ರರಾಜೇ ಅರಸ್ ಕಾರು ಚಾಲನೆ ಮಾಡುತ್ತಿದ್ದರು.  ಸತ್ಯಾನಂದರಾಜೇ ಅರಸ್​ ಎಲೆಕ್ಟ್ರಿಕ್ ಕಂಟ್ರ್ಯಾಕ್ಟರ್ ಆಗಿದ್ದರೆ, ಚಂದ್ರರಾಜೇ ಅರಸ್ ನಿವೃತ್ತ ಜೆಇ. ಸದ್ಯ ಮೃತದೇಹಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Ads on article

Advertise in articles 1

advertising articles 2

Advertise under the article