
ದ್ವಿತೀಯ ಪಿಯುಸಿಯಲ್ಲಿ ಅಮೂಲ್ಯ ಕಾಮತ್-ದೀಪಶ್ರೀ-ಸಂಜನಾ ರಾಜ್ಯಕ್ಕೆ ಪ್ರಥಮ
Tuesday, April 8, 2025
ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಮಂಗಳೂರು ಕೊಡಿಯಾಲ್ ಬೈಲ್ ಎಕ್ಸ್ ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ಅವರು 600 ಕ್ಕೆ 599 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದು, ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಶ್ರೀ 600ಕ್ಕೆ 599 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ವಿಜಯನಗರ (Vijayanagara) ಜಿಲ್ಲೆಯ ಸಂಜನಾ ಬಾಯಿ 600ಕ್ಕೆ 597 ಅಂಕ ಪಡೆಯುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ.
ಸಂಜನಾ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸಂಜನಾ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದವರಾಗಿದ್ದು, ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ.