ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಶೇ. ಉಡುಪಿ ಪ್ರಥಮ: ಯಾದಗಿರಿಗೆ ಕೊನೆಯ ಸ್ಥಾನ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಶೇ. ಉಡುಪಿ ಪ್ರಥಮ: ಯಾದಗಿರಿಗೆ ಕೊನೆಯ ಸ್ಥಾನ

ಬೆಂಗಳೂರು: 2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿಂದು ಫಲಿತಾಂಶದ ವಿವರ ನೀಡಿದರು.

ಈ ಬಾರಿ ಶೇಕಡಾ 93.90 ಫಲಿತಾಂಶ ಗಳಿಸಿ ಉಡುಪಿ ಜಿಲ್ಲೆ ಪ್ರಥಮ, ಶೇಕಡಾ 48.45 ಫಲಿತಾಂಶದೊಂದಿಗೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಗಳಿಸಿದೆ.

ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದು ಇವರು ದಕ್ಷಿಣ ಕನ್ನಡದ ಎಕ್ಸ್​ಪರ್ಟ್​ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಶ್ರೀ 600ಕ್ಕೆ ‌ 599 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ.ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದು, 600 ಕ್ಕೆ ‌597 ಅಂಕ ಪಡೆದಿದ್ದಾರೆ.

ಉಡುಪಿ ಜಿಲ್ಲೆ ಶೇಕಡಾ 93.90, ದಕ್ಷಿಣ ಕನ್ನಡ ಜಿಲ್ಲೆ 93.57, ಬೆಂಗಳೂರು ದಕ್ಷಿಣ 85.36, ಕೊಡಗು ಜಿಲ್ಲೆ 83.84ರಷ್ಟು ಫಲಿತಾಂಶ, ಬೆಂಗಳೂರು ಉತ್ತರ 83.31, ಉತ್ತರ ಕನ್ನಡ ಜಿಲ್ಲೆ 82.93ರಷ್ಟು ಫಲಿತಾಂಶದೊಂದಿಗೆ ಐದನೇ ಸ್ಥಾನದಲ್ಲಿದೆ.

ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,37,805 ವಿದ್ಯಾರ್ಥಿಗಳು ಬರೆದಿದ್ದರು. 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇಕಡಾ 53.29ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 76.07ರಷ್ಟು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡಾ 82.54ರಷ್ಟು ಉತ್ತೀರ್ಣರಾಗಿದ್ದಾರೆ.

ಫಲಿತಾಂಶ ನೋಡುವುದು ಹೇಗೆ?

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ ಸೈಟ್ ಗಳಾದ kseab.karnataka.gov.in ಮತ್ತು karresults.nic.in ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ಹಾಕುವ ಮೂಲಕ ವೀಕ್ಷಿಸಬಹುದು. 2025 ರ ದ್ವಿತೀಯ ಪಿಯುಸಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ ನಿಮ್ಮ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ ದ್ವಿತೀಯ ಪಿಯುಸಿ ಫಲಿತಾಂಶ 2025 ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

Ads on article

Advertise in articles 1

advertising articles 2

Advertise under the article