
ಸಿಬಿಎಸ್ಇ 10ನೇ ತರಗತಿ ಫಲಿತಾಂಶ; ಕಾಪು ಚಂದ್ರನಗರದ ಕ್ರೆಸೆಂಟ್ ಇಂಟರ್ನ್ಯಾಷನಲ್ ಸ್ಕೂಲ್'ಗೆ ಶೇ.100 ಫಲಿತಾಂಶ; ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ

ಕಾಪು: ಉಡುಪಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲೊಂದಾದ ಕಾಪು ಚಂದ್ರನಗರದ ಕ್ರೆಸೆಂಟ್ ಇಂಟರ್ನ್ಯಾಷನಲ್ ಸ್ಕೂಲ್ ಈ ಬಾರಿಯ ಸಿಬಿಎಸ್ಇ(ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್)ಯ 2024 -25ನೇ ಸಾಲಿನ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸುವ ಮೂಲಕ ಸಾಧನೆ ಮೆರೆದಿದೆ.
ಸತತವಾಗಿ ಶೇಕಡ 100% ಫಲಿತಾಂಶ ಸಾಧಿಸುತ್ತಲೇ ಬರುತ್ತಿರುವ ಕ್ರೆಸೆಂಟ್ ಇಂಟರ್ನ್ಯಾಷನಲ್ ಸ್ಕೂಲ್, ದಾಖಲೆ ಮಾಡುವತ್ತ ಮುನ್ನುಗ್ಗುತ್ತಿದೆ. ಈ ಬಾರಿ ಶಾಲೆಯ ವಿದ್ಯಾರ್ಥಿನಿ ಆಯೇಷಾ ಸಮ್ರ 500ರಲ್ಲಿ 479(96% )ಅಂಕ ಗಳಿಸುವ ಮೂಲಕ ಶಾಲೆಗೇ ಪ್ರಥಮ ಎನಿಸಿಕೊಂಡಿದ್ದಾರೆ.
ಸಂಸ್ಥೆಯ 35 ಮಂದಿ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದು, ಅದರಲ್ಲಿ 8 ಮಂದಿ ಉನ್ನತ ದರ್ಜೆ, 25 ಮಂದಿ ಪ್ರಥಮ ದರ್ಜೆಯಲ್ಲಿ, 2 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೇಕಡ 100% ಫಲಿತಾಂಶ ತಂದುಕೊಟ್ಟಿದ್ದಾರೆ.
ಈ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಶಂಶುದ್ದೀನ್ ಯೂಸುಫ್ ಸಾಹೇಬ್, ವ್ಯವಸ್ಥಾಪಕ ನಿರ್ದೇಶಕಿ ಶನಾಝ್ ಬೇಗಂ, ಉಪಾಧ್ಯಕ್ಷ ಆದಿಲ್ ಶಂಶುದ್ದೀನ್, ಕಾರ್ಯದರ್ಶಿ ಆಸಿಫ್ ಶಂಶುದ್ದೀನ್, ಪ್ರಾಂಶುಪಾಲ ಅಕ್ಬರ್ ಅಲಿ, ಉಪ ಪ್ರಾಂಶುಪಾಲ ಗುರುದತ್ತ್ ಹಾಗೂ ಶಾಲೆಯ ಶಿಕ್ಷಕ ವೃಂದ ಮಕ್ಕಳಿಗೆ ಹಾಗೂ ಪೋಷಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.