ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಫೈನಲ್ಸ್ ಪ್ರವೇಶಿಸಿದ RCB; ಬರೊಬ್ಬರಿ 9 ವರ್ಷಗಳ ಬಳಿಕ ಫೈನಲ್ಸ್ ಪ್ರವೇಶ

ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಫೈನಲ್ಸ್ ಪ್ರವೇಶಿಸಿದ RCB; ಬರೊಬ್ಬರಿ 9 ವರ್ಷಗಳ ಬಳಿಕ ಫೈನಲ್ಸ್ ಪ್ರವೇಶ

ಮೊಹಾಲಿಯಲ್ಲಿ ನಡೆದ ಐಪಿಎಲ್ 2025 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ XI ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳ ಅಂತರದ ಭರ್ಜರಿ ಜಯ ಗಳಿಸಿದ್ದು, ಫೈನಲ್ಸ್ ಪ್ರವೇಶಿಸಿದೆ.

ಬರೊಬ್ಬರಿ 9 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ತಂಡ ಫೈನಲ್ ಪ್ರವೇಶಿಸಿದ್ದು, ತಂಡದ ಅಭಿಮಾನಿಗಳಲ್ಲಿ ಸಂತಸ ಮೂಡಿದೆ. ಜೂನ್ 1 ರಂದು ನಡೆಯಲಿರುವ ಕ್ವಾಲಿಫೈಯರ್ 2 ರಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಎಲಿಮಿನೇಟರ್ ಪಂದ್ಯದ ವಿಜೇತರೊಂದಿಗೆ ಆಡುವ ಮೂಲಕ ಪಂಜಾಬ್ ಕಿಂಗ್ಸ್ ಫೈನಲ್‌ಗೆ ಪ್ರವೇಶಿಸಲು ಮತ್ತೊಂದು ಅವಕಾಶವನ್ನು ಪಡೆಯುತ್ತದೆ.

ಆರ್ ಸಿಬಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಪರಿಣಾಮ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ಕಿಂಗ್ಸ್ 14.1 ಓವರ್‌ಗಳಲ್ಲಿ ಕೇವಲ 101 ರನ್‌ಗಳಿಗೆ ಸರ್ವಪತನ ಕಂಡಿತು. ರನ್ ಚೇಸಿಂಗ್ ನಲ್ಲಿ ಆರ್ ಸಿಬಿ ಕೇವಲ 10 ಓವರ್ ಗಳಿಗೆ 2 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿ ಗೆಲುವನ್ನು ತನ್ನದಾಗಿಸಿಕೊಂಡಿತು.

ಮಾರ್ಕಸ್ ಸ್ಟೊಯಿನಿಸ್ 26 ರನ್‌ಗಳೊಂದಿಗೆ ತಂಡದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರಾರಾದರು. ಆರ್‌ಸಿಬಿ ಪರ ಸುಯಶ್ ಶರ್ಮಾ (3/17) ವೇಗಿಗಳಾದ ಜೋಶ್ ಹ್ಯಾಜಲ್‌ವುಡ್ (3/21), ಯಶ್ ದಯಾಳ್ (2/26) ಮತ್ತು ಭುವನೇಶ್ವರ್ ಕುಮಾರ್ (1/17) ಅತ್ಯುತ್ತಮ ಬೌಲರ್ ಗಳೆನಿಸಿದರು.

Ads on article

Advertise in articles 1

advertising articles 2

Advertise under the article