
ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಮೂವರನ್ನು ವಶಕ್ಕೆ ಪಡೆದ ಪೊಲೀಸರು
Wednesday, May 28, 2025
ಮಂಗಳೂರು: ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆನ್ನಲಾಗಿದೆ.
ಆರೋಪಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.