
ಉಡುಪಿ: ಚರ್ಚ್ ನಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಕುಸಿದುಬಿದ್ದು ಮಹಿಳೆ ಸಾವು
Monday, May 26, 2025
ಉಡುಪಿ: ಚರ್ಚ್ ನಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಕುಸಿದುಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಉಡುಪಿಯ ಅಜ್ಜರಕಾಡಿನ ಚರ್ಚ್ ವೊಂದರಲ್ಲಿ ಸಂಭವಿಸಿದೆ.
ಮೃತರನ್ನು ಕುಂದಾಪುರ ಖಾರ್ವಿ ಕೆಳಕೇರಿಯ ನಿವಾಸಿ ಶಾಂತಿ(52) ಎಂದು ಗುರುತಿಸಲಾಗಿದೆ. ಚರ್ಚ್ ನಲ್ಲಿ ಪ್ರಾರ್ಥನೆ ಮಾಡುತ್ತಿರುವಾಗ ಹಠಾತ್ ಕುಸಿದು ಬಿದ್ದ ಶಾಂತಿ ಅವರನ್ನು ಉಡುಪಿ ಟಿಎಂಎ ಪೈ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು ಮಹಿಳೆ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತರು ಕಳೆದ 5 ವರ್ಷಗಳಿಂದ ಥೈರಾಯಿಡ್ ಮತ್ತು ಗರ್ಭಕೋಶದ ಖಾಯಿಲೆಯಿಂದ ಬಳಲುತ್ತಿದ್ದು, ಇದೇ ಕಾರಣಕ್ಕೆ ಅವರು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.