
ಅಡ್ಡೂರು ಕೊಲ್ತಮಜಲುನಲ್ಲಿ ದುಷ್ಕರ್ಮಿಗಳಿಂದ ಇಬ್ಬರ ಮೇಲೆ ತಲವಾರು ದಾಳಿ; ಓರ್ವ ಮೃತ್ಯು
Tuesday, May 27, 2025
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದ್ದು, ಮಂಗಳವಾರ ದುಷ್ಕರ್ಮಿಗಳ ತಂಡವೊಂದು ಇಬ್ಬರ ಮೇಲೆ ತಲವಾರು ದಾಳಿ ಮಾಡಿದ ಪರಿಣಾಮ ಓರ್ವ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಅಡ್ಡೂರು ಕೊಲ್ತಮಜಲು ಎಂಬಲ್ಲಿ ಮಂಗಳವಾರ ವರದಿಯಾಗಿದೆ.
ಘಟನೆಯಲ್ಲಿ ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಅಬ್ದುಲ್ ರಹಿಮಾನ್ ಮೃತಪಟ್ಟಿದ್ದಾರೆ. ಮತ್ತೋರ್ವ ಯುವಕ ಕಲಂದರ್ ಶಾಫಿ ಗಾಯಗೊಂಡಿದ್ದಾರೆ.
ಇಬ್ಬರೂ ಕೊಲ್ತಮಜಲು ಎಂಬಲ್ಲಿ ಪಿಕ್ ಅಪ್ ವಾಹನದಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ತಲವಾರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.