ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನ ಶೌಚಾಲಯದಲ್ಲಿ ಪ್ರಚೋದನಕಾರಿ ಬರಹ: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನ ಶೌಚಾಲಯದಲ್ಲಿ ಪ್ರಚೋದನಕಾರಿ ಬರಹ: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಾರ್ಕಳ: ಇಲ್ಲಿನ ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ (Engineering College) ವಸತಿ ನಿಲಯದ ಗೋಡೆಯ ಮೇಲೆ ಓರ್ವ ವಿದ್ಯಾರ್ಥಿನಿಯೋರ್ವಳು ದೇಶ ವಿರೋಧಿ ಬರಹಗಳನ್ನು ಬರೆದಿರುವ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಶೌಚಾಲಯದಲ್ಲಿ ಪೆನ್ನು ಪತ್ತೆಯಾಗಿದ್ದು, ಒಳಗಿನ ಗೋಡೆಯಲ್ಲಿ ಹಿಂದು ಹಾಗೂ ಮುಸ್ಲಿಮ್ ಧರ್ಮಕ್ಕೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಬರೆಯಲಾಗಿದೆ. ಈ ಕುರಿತು ಅಪರಿಚಿತ ವಿದ್ಯಾರ್ಥಿನಿಯ ವಿರುದ್ಧ ಹಾಸ್ಟೆಲ್ ಮೆನೇಜರ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಿ ಕಾನೂನು ರೀತಿಯ ಕ್ರಮ ಜರಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article