ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಎಂ.ಎ. ಸಲೀಂ ನೇಮಕ

ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಎಂ.ಎ. ಸಲೀಂ ನೇಮಕ

ಬೆಂಗಳೂರು: ಬೆಂಗಳೂರು : ಕನ್ನಡಿಗ, ಹಿರಿಯ ಐಪಿಎಸ್‌ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮೇ 21ರಂದು ಕರ್ನಾಟಕದ ಪೊಲೀಸ್‌ ಮಹಾನಿರ್ದೇಶಕರಾಗಿರುವ ಡಾ.ಅಲೋಕ್‌ಮೋಹನ್‌ ಅವರು ಸೇವೆಯಿಂದ ನಿವೃತ್ತರಾಗಲಿದ್ದು, ಈ ಸ್ಥಾನಕ್ಕೆ ಕನ್ನಡಿಗ ಐಪಿಎಸ್‌ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ 21ರ ವರೆಗೆ ವಿಸ್ತರಣೆ ಮಾಡಲಾಗಿತ್ತು.

ಇಂದು ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ, ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕ ಮಾಡಲಾಗಿದೆ.

1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಸಲೀಂ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನುಪಡೆದುಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article