ಅಬ್ದುಲ್ ರಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು...?

ಅಬ್ದುಲ್ ರಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು...?


ಬಿಕೆ ಹರಿಪ್ರಸಾದ್ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ ಮುಖ್ಯಮಂತ್ರಿ 

ಬೆಂಗಳೂರು: ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಅಮಾಯಕ ಅಬ್ದುಲ್ ರಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಮೇಲುಗೈ ಸಾಧಿಸಬೇಕು ಮತ್ತು ದ್ವೇಷ ಕೊನೆಗೊಳ್ಳಬೇಕು ಎಂದಿದ್ದಾರೆ.

ಮೇ 27ರಂದು ಬಂಟ್ವಾಳದಲ್ಲಿ ನಡೆದ ಅಮಾಯಕ ಯುವಕ ಅಬ್ದುಲ್ ರಹಮಾನ್ ಹತ್ಯೆಯ ನಂತರ ಕರಾವಳಿ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟಾಗಿದೆ. ಮೇ 30ರವರೆಗೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕಾಂಗ್ರೆಸ್ ಎಂಎಲ್‌ಸಿ ಬಿಕೆ ಹರಿಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿ, ದಕ್ಷಿಣ ಕನ್ನಡ ಜಿಲ್ಲೆಯ ಸದ್ಯದ ಪರಿಸ್ಥಿತಿಯ ಕುರಿತು ಚರ್ಚೆ ನಡೆಸಿದರು.

'ಮಂಗಳೂರಿನಲ್ಲಿನ ಸದ್ಯದ ಪರಿಸ್ಥಿತಿ ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಆ ಪ್ರದೇಶದಲ್ಲಿ ಕೋಮು ಸಾಮರಸ್ಯ ಇರಬೇಕು. ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಯಾವುದೇ ದ್ವೇಷ ಇರಬಾರದು. ನಾವು ಅಲ್ಲಿ ಸಾಮರಸ್ಯವನ್ನು ತರಬೇಕು. ಅದಕ್ಕಾಗಿ ನಾವು ಚರ್ಚೆ ನಡೆಸಿದ್ದೇವೆ' ಎಂದು ಹರಿಪ್ರಸಾದ್ ಅವರ ಮನೆಗೆ ಭೇಟಿ ನೀಡಿದ ನಂತರ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

ಹರಿಪ್ರಸಾದ್ ಅವರನ್ನು ಮಂಗಳೂರಿಗೆ ಭೇಟಿ ನೀಡುವಂತೆ ಕೇಳಿಕೊಂಡಿದ್ದೇನೆ ಎಂದು ಅವರು ಹೇಳಿದರು.

ದಕ್ಷಿಣ ಕನ್ನಡದಲ್ಲಿ ನಡೆದ ಸೇಡಿನ ಹತ್ಯೆಗಳ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 'ಅದರಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರ ಮೇಲೂ ನಾವು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ. ಆ ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ ಸಹ. ಯಾರೂ ಕಾನೂನಿಗಿಂತ ಮೇಲಲ್ಲ. ಕಾನೂನು ಮಾತ್ರ ಎಲ್ಲಕ್ಕಿಂತ ಮೇಲಿರುತ್ತದೆ' ಎಂದು ಹೇಳಿದರು.

ಕೋಮು ವಿರೋಧಿ ಕಾರ್ಯಪಡೆ ರಚಿಸಲಾಗುತ್ತದೆಯೇ ಎಂದು ಕೇಳಿದಾಗ, ಅದರ ಬಗ್ಗೆ ಚರ್ಚಿಸುವುದಾಗಿ ಹೇಳಿದರು.

Ads on article

Advertise in articles 1

advertising articles 2

Advertise under the article