ಉಡುಪಿ; ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ, ಹತ್ಯೆ, ದೇವಾಲಯ ಪ್ರವೇಶ ನಿರಾಕರಣೆ, ಅತ್ಯಾಚಾರ, ಕಿರುಕುಳ ಖಂಡಿಸಿ ದಲಿತ ಹಕ್ಕುಗಳ ಸಮಿತಿಯಿಂದ ಪ್ರತಿಭಟನೆ

ಉಡುಪಿ; ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ, ಹತ್ಯೆ, ದೇವಾಲಯ ಪ್ರವೇಶ ನಿರಾಕರಣೆ, ಅತ್ಯಾಚಾರ, ಕಿರುಕುಳ ಖಂಡಿಸಿ ದಲಿತ ಹಕ್ಕುಗಳ ಸಮಿತಿಯಿಂದ ಪ್ರತಿಭಟನೆ

 

ಮಣಿಪಾಲ: ದಲಿತ ಹಕ್ಕುಗಳ ಸಮಿತಿ (DHS) ಉಡುಪಿ ಸಂಚಾಲನ ಸಮಿತಿ ನೇತ್ರತ್ವದಲ್ಲಿ ರಾಜ್ಯ ಸಮಿತಿ ಕರೆಯ ಮೇರೆಗೆ ಕರ್ನಾಟಕ ರಾಜ್ಯದಲ್ಲಿ ದಲಿತರ ಮೇಲೆ  ನಡೆಯುತ್ತಿರುವ  ದಲಿತರ ಮೇಲಿನ  ದೌರ್ಜನ್ಯ, ದಲಿತರ ಹತ್ಯೆ, ದೇವಾಲಯ ಪ್ರವೇಶ ನಿರಾಕರಣೆ, ದಲಿತ ಮಹಿಳೆಯರ ಅತ್ಯಾಚಾರ, ದಲಿತರಿಗೆ ನೀಡುತ್ತಿರುವ ಕಿರುಕುಳ ಖಂಡಿಸಿ ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮುಖಾಂತರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾ ಸಭೆ ಉದ್ದೇಶಿಸಿ ಮಾತಾನಾಡಿದ ಸಂಜೀವ ಬಳ್ಕೂರು, ಮಂಡ್ಯದ ಕೆ.ಆರ್.ಪೇಟೆಯಲ್ಲಿ ದಲಿತ ಜಯಕುಮಾರ್  ಜಮೀನು ಅಕ್ರಮಣ ಮಾಡಲು ಮುಂದಾದ  ರೌಡಿ ಶೀಟರ್ ಅನಿಲ್ ಕುಮಾರ್ ಎಂಬಾತನಿಂದ  ಕೊಲೆ ಆಗಿದ್ದು, ಪತ್ನಿ ಲಕ್ಷೀ ಪೋಲಿಸ್ ಠಾಣೆ ಮೆಟ್ಟಿಲು ಏರಿ ಕೇಸು ದಾಖಲಿಸಲು ಮುಂದಾದಾಗ ಪೋಲೀಸರು ಕೇಸ್ ಪಡೆಯದೆ  ಸತಾಯಿಸಿ ವಾಪಾಸು ಕಳುಹಿಸಿದ್ದು, ತಮೇಲ್ಲರ ಗಮನಕ್ಕೆ ಬಂದಿದೆ. 

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಬನವಾಸಿ ಗ್ರಾಮದ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಮತ್ತು ದೇವಸ್ಥಾನ ಪ್ರವೇಶ ನಿರಾಕಾರಿಸಿದ್ದು ಜನತೆ ನಾಚಿಕೆ ಪಡುವಂತಾಗಿದೆ. ಬಿಡದಿ ಹೋಬಳಿ, ಭದ್ದರಾಪುರ ಗ್ರಾಮದ ಬಡಾ ಕೂಲಿಕಾರ ಕುಟುಂಬದ ದಲಿತ  ಬಾಲಕಿಯನ್ನು ಆತ್ಯಾಚಾರ ಮಾಡಿ ಕೊಲೆ ಗೈದಿದ್ದಾರೆ. ಇದನ್ನು ಪೋಲಿಸ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮುಚ್ಚಿ ಹಾಕಲು ಪ್ರಾಭಾವಿ ವ್ಯಕ್ತಿಗಳು  ಪ್ರಯತ್ನಿಸಿದರು. ಅದೇ ರೀತಿ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕವಣಗಾಲಿ ದೇವಾಲಯ ದಲಿತರಿಗೆ ಪ್ರವೇಶ ನಿರಾಕರಣೆ ಮತ್ತು ಕೊಲ್ಲೂರು ಪ್ರದೇಶದಲ್ಲಿ ದಲಿತ ಮಹಿಳೆಯ ಮನೆಯನ್ನು ಯಾರು ಇಲ್ಲದ ಸಮಯದಲ್ಲಿ ಕೆಡವಿ ಜಾಗ ಆಕ್ರಮಣ ಮಾಡಲು ಮುಂದಾದ ಬಾಲಾಡ್ಯ ಶಕ್ತಿಗಳನ್ನು ಬಂಧಿಸಿ ನ್ಯಾಯ ಒದಗಿಸಲು ಒತ್ತಾಯಿಸಿದರು.  

ಪ್ರತಿಭಟನಾ ಸಭೆಯಲ್ಲಿ ದಲಿತ ಹಕುಗಳ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ ಸಂಜೀವ ಬಳ್ಕೂರು, ಸಹಸಂಚಾಲಕ ರವಿ.ವಿ.ಎಮ್, ಸಮಿತಿ ಪದಾಧಿಕಾರಿಗಳಾದ ರಾಮ ಕಾರ್ಕಡ, ನಾಗರತ್ನ ನಾಡ, ಶಾರದ, ನಾಗರತ್ನ ಆರ್, ರಂಗನಾಥ ಸುವರ್ಣ, ಮನೋಜ್, ಸುಶೀಲ, ಪೂರ್ಣಿಮಾ ಬಳ್ಕೂರು, ಅಣಪ್ಪ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ಹಂಚು ಕಾರ್ಮಿಕ ಸಂಘದ ಕಾರ್ಯದರ್ಶಿ ಎಚ್.ನರಸಿಂಹ, ಸಿಐಟಿಯು ಕುಂದಾಪುರ ತಾಲೂಕು ಸಂಚಾಲಕ  ಚಂದ್ರಶೇಖರ, ಸಿಐಟಿಯು ಉಡುಪಿ ವಲಯ ಸಂಚಾಲಕ  ಕವಿರಾಜ್. ಎಸ್.ಕಾಂಚನ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article