ಮೇ 30ರಂದು ಉಡುಪಿಯಲ್ಲಿ ರಾಜ್ಯಮಟ್ಟದ "ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ": ಸುದ್ದಿಗೋಷ್ಠಿಯಲ್ಲಿ ಜಯಕರ ಶೆಟ್ಟಿ ಇಂದ್ರಾಳಿ ಮಾಹಿತಿ

ಮೇ 30ರಂದು ಉಡುಪಿಯಲ್ಲಿ ರಾಜ್ಯಮಟ್ಟದ "ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ": ಸುದ್ದಿಗೋಷ್ಠಿಯಲ್ಲಿ ಜಯಕರ ಶೆಟ್ಟಿ ಇಂದ್ರಾಳಿ ಮಾಹಿತಿ


ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇದರ ಆಯೋಜನೆಯಲ್ಲಿ ರಾಜ್ಯಮಟ್ಟದ "ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ" ಇದೇ ಮೇ 30ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಪರ್ಯಾಯ ಪುತ್ತಿಗೆ ಮಠಾಧೀರಾದ ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯ ಮುಖ್ಯ ಆಯುಕ್ತ ಪಿ.ಜಿ. ಆರ್ ಸಿಂಧ್ಯಾ ಸಭಾಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 1200 ಪ್ರತಿಭಾನ್ವಿತ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು‌. 

ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತರಾದ ಡಾ. ಮೋಹನ್ ಆಳ್ಳ, ಉಡುಪಿ ಚಿಕ್ಕಮಗಳೂರು ಸಂಸದರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ, ರಾಜ್ಯದ ವಿಧಾನ ಸಭೆಯ ಸ್ಪೀಕರ್ ಯುಟಿ ಖಾದ‌ರ್, ಶಾಸಕರಾದ ಯಶ್ ಪಾಲ್ ಸುವರ್ಣ, ಕಾಪು ಗುರ್ಮ ಸುರೇಶ್ ಶೆಟ್ಟಿ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಆಯುಕ್ತರಾದ ಎಂ. ಪ್ರಭಾಕರ್ ಭಟ್, ಉಡುಪಿ ಜಿಲ್ಲಾ ಸೌಟ್ ಆಯುಕ್ತ ಜನಾರ್ದನ್ ಕೊಡವೂರು, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಸುಮನಾ ಶೇಖರ್, ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article