ಪ್ರಚೋದನಾಕಾರಿ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

 


ಬೆಂಗಳೂರು: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.

ಬಜ್ಪೆಯಲ್ಲಿ ಹತ್ಯೆಯಾದ ರೌಡಿಶೀಟರ್ ಸುಹಾಸ್ ಶೆಟ್ಟಿ ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ 353(2) ಅಡಿಯಲ್ಲಿ ಕೇಸ್‌ ದಾಖಲು ಮಾಡಿ ವಿಚಾರಣೆಗೆ ಮುಂದಾಗಿದ್ದರು.

ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ವಿಚಾರಣೆಗೆ ಮನವಿ ಮಾಡಿದ್ದು, ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣಕುಮಾರ್ ಅವರಿದ್ದ ಪೀಠವು ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ ನೀಡಿದೆ. 

ಮೇ 12 ರಂದು ಬಂಟ್ವಾಳದ ಕಾವಳಪಡೂರು ಮದ್ವ ಪ್ಯಾಲೇಸ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.