IPL ಚಾಂಪಿಯನ್ RCB ತಂಡಕ್ಕೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕೊನೆಗೂ 18 ವರ್ಷಗಳ ಕಾಯುವಿಕೆಯ ನಂತರ ಮೊದಲ ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಆಗಮಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ (RCB) ತಂಡವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಸ್ವಾಗತಿಸಿದರು.

ಆರ್‌ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಇಂದು ವಿಧಾಸೌಧದ ಮುಂದೆ ಭವ್ಯವಾದ ಅಭಿನಂದನಾ ಸಮಾರಂಭ ಆಯೋಜಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು ಮತ್ತು ಶಾಸಕರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಜತ್ ಪಟಿದಾರ್ ನೇತೃತ್ವದ ತಂಡವನ್ನು ಸನ್ಮಾನಿಸಿದರು.

ಐಪಿಎಲ್(IPL) ಕಪ್ ಜಯಿಸಿ ತವರಿಗೆ ಮರಳಿರುವ RCB ತಂಡಕ್ಕೆ ಬೆಂಗಳೂರಿನಲ್ಲಿ ಅಭಿಮಾನಿಗಳಿಂದಲೂ ಅದ್ದೂರಿ ಸ್ವಾಗತ ದೊರೆತಿದೆ.

ಗುಜರಾತ್​​ನ ಅಹ್ಮದಾಬಾದ್​​ನಿಂದ ಬೆಂಗಳೂರಿನ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆರ್​ಸಿಬಿ ಆಟಗಾರರನ್ನು ಸರ್ಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು.