ಹಿರಿಯಡಕ - ಪೆರ್ಡೂರು - ಹೆಬ್ರಿ ಮುಖ್ಯ ರಸ್ತೆ ಕಾಮಗಾರಿ; ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪರಿಶೀಲನೆ

ಹಿರಿಯಡಕ - ಪೆರ್ಡೂರು - ಹೆಬ್ರಿ ಮುಖ್ಯ ರಸ್ತೆ ಕಾಮಗಾರಿ; ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪರಿಶೀಲನೆ

ಹಿರಿಯಡಕ - ಪೆರ್ಡೂರು - ಹೆಬ್ರಿ ಮುಖ್ಯ ರಸ್ತೆ (ರಾಷ್ಟ್ರೀಯ ಹೆದ್ದಾರಿ 160 A) ಕಾಮಗಾರಿ ಪ್ರಗತಿಯಲ್ಲಿದ್ದು, ಇಂದು ದಿನಾಂಕ 09-06-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕೊಡಿಬೆಟ್ಟು, ಹಿರಿಯಡಕ, ಪೆರ್ಡೂರು ಭಾಗದಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.




ಕೆಲದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂuದಾಗಿ ಅಸಮರ್ಪಕ ಚರಂಡಿಯಿಂದ ಮನೆಗಳಿಗೆ ನೀರು ನುಗ್ಗಿದ್ದು ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥಿತವಾದ ಚರಂಡಿಯನ್ನು  ತಕ್ಷಣವೇ ನಿರ್ಮಿಸುಂತೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕಿರು ರಸ್ತೆಗಳನ್ನು ಹಾಳಾಗಿದ್ದು ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಶೀಘ್ರವೇ ದುರಸ್ತಿ ಗೊಳಿಸುವಂತೆ ಶಾಸಕರು ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಉಪಾಧ್ಯಕ್ಷರಾದ ಇಂದಿರಾ ಕೆ, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ರಾಷ್ಟ್ರೀಯ ಹೆದ್ದಾರಿ ಸಹಾಯಕ ಅಭಿಯಂತರರಾದ ಮಂಜುನಾಥ್ ನಾಯಕ್ ಹಾಗೂ ಕೊಡಿಬೆಟ್ಟು, ಬೊಮ್ಮರಬೆಟ್ಟು, ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article