ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಜಲ್ ಜೀವನ್ ಮಿಷನ್-ಅಮೃತ ಯೋಜನೆಯ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆ

ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಜಲ್ ಜೀವನ್ ಮಿಷನ್-ಅಮೃತ ಯೋಜನೆಯ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆ

 

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಲ್ ಜೀವನ್ ಮಿಷನ್ ಹಾಗೂ ಅಮೃತ ಯೋಜನೆ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆ ಗುರುವಾರ ಕಾಪು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಸಭೆಯಲ್ಲಿ ಜಲ್ ಜೀವನ್ ಮಿಷನ್ ಯೋಜನೆ ಹಾಗೂ ಅಮೃತ್ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಪೈಪ್ ಲೈನ್ ಕಾಮಗಾರಿಯನ್ನು ಗುಣಮಟ್ಟ ಕಾಯ್ದುಕೊಂಡು ತ್ವರಿತವಾಗಿ ಪೂರ್ಣಗೊಳಿಸುವಂತೆ ಜೊತೆಗೆ ಕುಡಿಯುವ ನೀರಿನ ಜಲ ಮೂಲ ಕೊರತೆ ಇರುವ ಪ್ರದೇಶಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡುವಂತೆ ಇಲಾಖಾಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಉದಯ್ ಕುಮಾರ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವೆಂಕಟೇಶ್ ಮೂರ್ತಿ, ಕೆ.ಯು.ಡಬ್ಲು.ಎಸ್ ಅಂಡ್ ಡೈನೇಜ್ ಬೋರ್ಡ್ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅಜಯ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article