
ಕಲಬುರಗಿಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ
Wednesday, June 25, 2025
ಕಲಬುರಗಿ: ಕಲಬುರಗಿ ಹೊರವಲಯದ ಪಟ್ನಾ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕೊಲೆಯಾದವರನ್ನು ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಹತ್ಯೆಯಾದವರು ಸಂಬಂಧಿಕರಾಗಿದ್ದಾರೆ. ತಡರಾತ್ರಿ 1.30 ರ ಸುಮಾರಿಗೆ ಡ್ರೈವರ್ ಡಾಬಾಗೆ ನುಗ್ಗಿದ ಹಂತಕರು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹಳೆಯ ದ್ವೇಷದ ಕಾರಣ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ಸಬ್ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.