ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರ ವರೆಗೆ 11 ದಿನಗಳ ಕಾಲ ದಸರಾ ಆಚರಣೆ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರ ವರೆಗೆ 11 ದಿನಗಳ ಕಾಲ ದಸರಾ ಆಚರಣೆ

ಬೆಂಗಳೂರು/ಮೈಸೂರು: ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಒಟ್ಟು 11 ದಿನಗಳ ಕಾಲ ದಸರಾ ಆಚರಣೆ ನಡೆಯಲಿದೆ. ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದಸರಾ ಆಚರಣೆ ಕುರಿತ ಪೂರ್ವಭಾವಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. 

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರ ವರೆಗೆ ಒಟ್ಟು 11 ದಿನಗಳ ಕಾಲ ದಸರಾ ಆಚರಣೆ ನಡೆಯಲಿದೆ. ಕಳೆದ 100 ವರ್ಷದಲ್ಲಿ 8 ನೇ ಬಾರಿ 11 ದಿನದ ದಸರಾ ಆಚರಣೆ ಮಾಡಲಾಗುತ್ತಿದೆ. ಈ ಬಾರಿಯೂ 21 ದಿನಗಳ ಕಾಲ ದೀಪ ಅಲಂಕಾರ ಇರಲಿದೆ. ಈ ಬಾರಿ ಅಂದಾಜು 10 ಲಕ್ಷ ಜನ ದಸರಾದಲ್ಲಿ ಭಾಗವಹಿಸಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.  

ಪೊಲೀಸರು ಜನಸ್ನೇಹಿ ಆಗಿರಬೇಕು. ಪ್ರವಾಸಿಗರೊಂದಿಗೆ ಪ್ರೀತಿಯಿಂದ ವರ್ತಿಸಬೇಕು. ದಸರಾ ಕೊನೆಯ ದಿನ ಅಕ್ಟೋಬರ್ 2 ಗಾಂಧಿ ಜಯಂತಿ, ಹೀಗಾಗಿ ಟ್ಯಾಬ್ಲೋದಲ್ಲಿ ಗಾಂಧಿ ಜಯಂತಿಗೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ ಎಂದಿದ್ದಾರೆ. 

Ads on article

Advertise in articles 1

advertising articles 2

Advertise under the article