
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಆರೋಪಿಗಳು NIA ವಶಕ್ಕೆ
Monday, June 23, 2025
ಬೆಂಗಳೂರು: ಬಜ್ಪೆ ಬಳಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (NIA) ಕಸ್ಟಡಿಗೆ ನೀಡಿದೆ.
ಪ್ರಕರಣ ಸಂಬಂಧ ಎನ್ಐಎ ಪ್ರತ್ಯೇಕವಾಗಿ ಎಫ್ಐಆರ್ ದಾಖಲಿಸಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್ಐಎ ಎಸ್ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಬೆಂಗಳೂರಿನ 50ನೇ ಸಿಸಿಹೆಚ್ ನ್ಯಾಯಾಲಯ ಜುಲೈ 1ರವರೆಗೆ ಆರೋಪಿಗಳನ್ನು ಎನ್ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.
ಸುಹಾಸ್ ಶೆಟ್ಟಿ ಹತ್ಯೆಗೆ ಸಫ್ವಾನ್ ತಂಡಕ್ಕೆ ಈ ಹಿಂದೆ ಹತ್ಯೆಯಾಗಿದ್ದ ಫಾಜಿಲ್ ಸಹೋದರ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದ ಎನ್ನಲಾಗಿದೆ. ಅದರಂತೆ ಈ ಕೊಲೆ ನಡೆಸಲಾಗಿತ್ತು.