ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ಅವರು ಇಂದು ಅಧಿಕಾರ ವಹಿಸಿಕೊಂಡರು. ಮಧ್ಯಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು.
ಸ್ವರೂಪ ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.