ಮೆದುಳಿಗೆ ಮತ್ತು ದೇಹಕ್ಕೆ ಯೋಗ ಅತ್ಯಗತ್ಯ: ಅಂತಾರಾಷ್ಟ್ರೀಯ ಯೋಗ ದಿನ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಮೆದುಳಿಗೆ ಮತ್ತು ದೇಹಕ್ಕೆ ಯೋಗ ಅತ್ಯಗತ್ಯ: ಅಂತಾರಾಷ್ಟ್ರೀಯ ಯೋಗ ದಿನ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ಕಾಪು ಮಂಡಲ ಬಿಜೆಪಿ ಸಭಾಂಗಣದಲ್ಲಿ ನಡೆದ "ಅಂತಾರಾಷ್ಟ್ರೀಯ ಯೋಗ ದಿನ" ಕಾರ್ಯಕ್ರಮನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.


ಬಳಿಕ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ 2014 ರಲ್ಲಿ ಆರಂಭವಾದ ಅಂತರಾಷ್ಟ್ರೀಯ ಯೋಗ ದಿನ ಇಂದು 170ಕ್ಕೂ ಅಧಿಕ ದೇಶಗಳಲ್ಲಿ ನಡೆಯುತ್ತಿದೆ ಎಂದು ಹೇಳಿದರಲ್ಲದೆ, ಮೆದುಳಿಗೆ ಮತ್ತು ದೇಹಕ್ಕೆ ಯೋಗ ಅತ್ಯಗತ್ಯ ಎಂದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಕಾಪು ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷರಾದ ನೀತಾ ಗುರುರಾಜ್, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ, ಜಿಲ್ಲಾ ಬಿಜೆಪಿ ನಿಕಟಪೂರ್ವ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸಂಧ್ಯಾ ಕಾಮತ್, ಯೋಗ ಗುರುಗಳಾದ ಸೀತಾರಾಯ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article