ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಪ್ರಕರಣ: ಕಾರಣವನ್ನು ಬಿಚ್ಚಿಟ್ಟ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್

ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಪ್ರಕರಣ: ಕಾರಣವನ್ನು ಬಿಚ್ಚಿಟ್ಟ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಗಳು  ಹೆಚ್ಚಾಗುತ್ತಿರುವ ಕುರಿತಂತೆ ತಾಂತ್ರಿಕ ಸಮಿತಿ ಸದಸ್ಯರು ಅಧ್ಯಯನ ನಡೆಸಿ, ವರದಿ ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್  ಅವರಿಗೆ ಸಲ್ಲಿಸಿದರು. ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್​ ಗುಂಡುರಾವ್​ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್​ ಗುಂಡುರಾವ್​, ಹಾಸನದಲ್ಲಿ ಜನರು ಹೃದಯಾಘಾತದಿಂದ ಸಾವಿಗೀಡಾಗಿರುವುದಕ್ಕೆ ಕಾರಣ ಮಧುಮೇಹ, ಮದ್ಯಪಾನ ಮತ್ತು ಕುಟುಂಬದ ಹಿನ್ನೆಲೆ ಅಂತ ವರದಿ ಮೂಲಕ ತಿಳಿದುಬಂದಿದೆ ಎಂದು ಹೇಳಿದರು.

“ಮೇ ಮತ್ತು ಜೂನ್ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ 24 ಜನರ ಸಾವಿನ ಬಗ್ಗೆ ತಜ್ಞರು ನೀಡಿದ ಅಧ್ಯಯನ ವರದಿಯಲ್ಲಿ ನಾಲ್ವರು ಹೃದಯ ಸ್ತಂಭನದಿಂದ ಮೃತಪಟ್ಟಿಲ್ಲವೆಂದು ಇದೆ. ಇನ್ನುಳಿದ 20 ಜನರಲ್ಲಿ 10 ಜನರು ಹೃದಯಕ್ಕೆ ಸಂಬಂಧಿ ಸಮಸ್ಯೆಯಿಂದ ಮೃತಪಟ್ಟಿದ್ದಾರೆ. 10 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಬಹುದು. ಮೃತಪಟ್ಟ 20 ಜನರಲ್ಲಿ 15 ಮಂದಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ” ಎಂದರು.

ಹಾಸನದಲ್ಲಿ ಹೃದಯಾಘಾತ ಹೆಚ್ಚಾಗ್ತಿದೆಯಾ ಎಂಬ ಆತಂಕ ಇತ್ತು. 2024ರಲ್ಲಿ ಹೃದಯಾಘಾತದಿಂದ 24 ಜನರು ಮೃತಪಟ್ಟಿದ್ದಾರೆ. ಈ ವರ್ಷ 20 ಜನರ ಸಾವಾಗಿದೆ, ಆತಂಕ ಪಡುವ ಸಂಗತಿ ಇಲ್ಲ. ಚಿಕ್ಕ ವಯಸ್ಸಿನವರಿಗೆ ಹೃದಯಾಘಾತವಾಗುತ್ತಿದ್ದು ಗಂಭೀರ ವಿಚಾರವಾಗಿದೆ. ಚಿಕ್ಕ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದಕ್ಕೆ ಅತಿಯಾದ ಬೊಜ್ಜು ಕಾರಣ ಎಂಬುವುದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ ಎಂದು ತಿಳಿಸಿದರು.

Ads on article

Advertise in articles 1

advertising articles 2

Advertise under the article