
ಕೊಡಗಿನ ದೇವರಕೊಲ್ಲಿ ಬಳಿ ಲಾರಿ-ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ
Friday, July 25, 2025
ಮಡಿಕೇರಿ: ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ನಡೆದು ನಾಲ್ವರು ಸಾವನ್ನಪ್ಪಿದ ಘಟನೆ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಕಿಬ್ ಹಾಗೂ ರಿಶು ಮೃತ ದುರ್ದೈವಿಗಳು. ಮಧ್ಯಾಹ್ನ 12:50 ಗಂಟೆ ಸುಮಾರಿನಲ್ಲಿ ಮಡಿಕೇರಿಯಿಂದ ಸುಳ್ಯದ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಲಾರಿಯ ನಡುವೆ ಡಿಕ್ಕಿ ಸಂಭವಿಸಿದೆ. ಮೃತದೇಹಗಳನ್ನು ಸುಳ್ಯದ ಆಸ್ಪತ್ರೆಯಲ್ಲಿ ಇಡಲಾಗಿದೆ.
ಸಂಪಾಜೆಯ ಶರತ್ ಕೀಲಾರು, ತಾಜುದ್ದೀನ್ ಸೇರಿದಂತೆ ಯುವಕರ ತಂಡ ನಾಲ್ಕು ಆಂಬ್ಯುಲೆನ್ಸ್‌ನಲ್ಲಿ ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದರು. ಅಷ್ಟೊತ್ತಿಗಾಗಲೇ ನಾಲ್ವರೂ ಮೃತಪಟ್ಟಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.