
ಶಿರ್ವ ಫೈಝುಲ್ ಇಸ್ಲಾಂ ಶಾಲೆಯಲ್ಲಿ 2024-25 ನೇ ಸಾಲಿನಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸನ್ಮಾನ
Thursday, July 31, 2025
ಶಿರ್ವ:ಇಲ್ಲಿನ ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಸಾಲಿನಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಅಲ್ ಸುಹೇಮಿ ಸಭಾಂಗಣದಲ್ಲಿ ಇಂದು ನಡೆಯಿತು.
ಈ ಸಮಾರಂಭದಲ್ಲಿ ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಉಮರ್ ಇಸ್ಮಾಯಿಲ್ ಅವರು ಅಧ್ಯಕ್ಷತೆಯನ್ನು ವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಮಾರಂಭ ವೇದಿಕೆಯಲ್ಲಿ ಗೌರವ ಅತಿಥಿಗಳಾಗಿ ಮುಸ್ಲಿಂ ಒಕ್ಕೂಟ ಕಾಪು ಘಟಕದ ಅಧ್ಯಕ್ಷ ನಸೀರ್ ಅಹ್ಮದ್, ಉದ್ಯಮಿಗಳಾದ ರಫೀಕ್, ಸಾದಿಕ್ ಹಾಗು ಶಾಲಾ ಧರ್ಮಗುರುಗಳಾದ ಮೌಲಾನ ಉಬೇದುರ್ರಹ್ಮಾನ್, ಶಾಲಾ ಮುಖ್ಯ ಶಿಕ್ಷಕಿ ಖೈರುನ್ನಿಸ ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಷಕಿ ಅಲ್ಫಿಯ ಕಾರ್ಯಕ್ರಮವನ್ನು ನಿರೂಪಿಸಿ, ಸಹ ಶಿಕ್ಷಕಿ ಅಫ್ಸಾನ ಧನ್ಯವಾದಗೈದರು.