
9/11 ಸಮಸ್ಯೆ; ಜುಲೈ 28ರಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ: ಪೂರ್ವಭಾವಿ ಸಭೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
ಉಡುಪಿ ಜಿಲ್ಲೆಯಲ್ಲಿ ಜನಸಾಮಾನ್ಯರು ಎದುರುತ್ತಿರುವ 9/11 ಸಮಸ್ಯೆ ಬಗ್ಗೆ ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಜುಲೈ 28 ರಂದು ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿಗಳಾದ ಕಚೇರಿ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇದರ ಪೂರ್ವಭಾವಿಯಾಗಿ ಇಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಶಾಸಕರು ಮಾತನಾಡಿ ಜನ ಸಾಮಾನ್ಯರು 9/11 ಸಮಸ್ಯೆಯಿಂದ ಪ್ರಾಧಿಕಾರದ ಕಚೇರಿಗೆ ದಿನನಿತ್ಯವೂ ಅಲೆದಾಡುವಂತಾಗಿದೆ. ರಾಜ್ಯ ಸರ್ಕಾರದ ಈ ಆದೇಶದ ವಿರುದ್ಧ ಜುಲೈ 28 ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಡೆಯುವ ನಡೆಯಲಿರುವ ಪ್ರತಿಭಟನೆಯಲ್ಲಿ ಕಾಪು ಕ್ಷೇತ್ರದಿಂದ ನಾವೆಲ್ಲರೂ ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸೋಣ ಎಂದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.