ಉಚ್ಚಿಲ ದಸರಾ ಉತ್ಸವಕ್ಕೆ ಮೆಚ್ಚುಗೆ; ಸರಕಾರದಿಂದ ಸರ್ವ ರೀತಿಯ ಸಹಾಯ, ಸಹಕಾರದ ಭರವಸೆ: ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಚಿವ ರಾಮಲಿಂಗಾ ರೆಡ್ಡಿ

ಉಚ್ಚಿಲ ದಸರಾ ಉತ್ಸವಕ್ಕೆ ಮೆಚ್ಚುಗೆ; ಸರಕಾರದಿಂದ ಸರ್ವ ರೀತಿಯ ಸಹಾಯ, ಸಹಕಾರದ ಭರವಸೆ: ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಚಿವ ರಾಮಲಿಂಗಾ ರೆಡ್ಡಿ


ಫೋಟೋ: ಸಚಿನ್ ಪೂಜಾರಿ ಉಚ್ಚಿಲ 

ಪಡುಬಿದ್ರಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ರವಿವಾರ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ವೇಳೆ  ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ದಸರಾ ಉತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ರವಿವಾರ ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದ ಸಚಿವರು, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ, ಈ ಬಾರಿಯ ಉಡುಪಿ ಉಚ್ಚಿಲ ದಸರಾ ಉತ್ಸವ ಸೇರಿದಂತೆ ಕ್ಷೇತ್ರದಲ್ಲಿ ನಡೆಯುತ್ತಿರುವ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸರಕಾರದ ವತಿಯಿಂದ ಸರ್ವ ರೀತಿಯ ಸಹಾಯ, ಸಹಕಾರ ನೀಡುವುದಾಗಿ ಹೇಳಿದರು. 

ಮೊಗವೀರ ಮುಖಂಡ, ದೇವಸ್ಥಾನದ ರೂವಾರಿ ನಾಡೋಜ ಡಾ. ಜಿ.ಶಂಕರ್ ಅವರು ಸಚಿವರಿಗೆ ಶಾಲು ಹೊದಿಸಿ ಗೌರವಿಸಿದರು. ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಮಾಜಿ ಸಚಿವರುಗಳಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಕಾಪು ದಿವಾಕರ್ ಶೆಟ್ಟಿ, ಮಹಾಜನ ಸಂಘದ ಉಪಾಧ್ಯಕ್ಷರಾದ ಮೋಹನ್ ಬೆಂಗ್ರೆ, ಗಿರಿಧರ್ ಸುವರ್ಣ, ಶರಣ್ ಕುಮಾರ್ ಮಟ್ಟು, ವಿನಯ್ ಕರ್ಕೇರ, ಗುಂಡು ಬಿ. ಅಮೀನ್, ದೇವಸ್ಥಾನದ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ, ರತ್ನಾಕರ್ ಸಾಲ್ಯಾನ್, ಸುಧಾಕರ್ ಕುಂದರ್, ಸುಜಿತ್ ಸಾಲ್ಯಾನ್, ಉಷಾರಾಣಿ ಬೋಳೂರು, ಸುಗುಣ ಕರ್ಕೇರ,ಕಿರಣ್ ಕುಮಾರ್ ಪಿತ್ರೋಡಿ ಜಯಂತ್ ಅಮೀನ್ ಕೋಡಿ, ಶಂಕರ್ ಸಾಲ್ಯಾನ್ ಬಾರ್ಕೂರು ನಾರಾಯಣ ಕರ್ಕೇರ, ರಾಜೇಂದ್ರ ಸುವರ್ಣ ಹಿರಿಯಡ್ಕ, ಮೋಹನ್ ಬಂಗೇರ ಕಾಪು ಸೇರಿದಂತೆ ಆಡಳಿತ ಸಮಿತಿಯ ಸದಸ್ಯರು, ಮಹಿಳಾ ಸದಸ್ಯರು ಈ ವೇಳೆ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article