
ಜುಲೈ 31ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಬ್ರಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ
ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಜುಲೈ 31ರ ಗುರುವಾರದಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹಾಗೂ ಜಿಲ್ಲಾಸ್ಪತ್ರೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಬ್ರಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮುಂಡ್ಕೂರು ದುರ್ಗ ಪರಮೇಶ್ವರಿ ದೇವಸ್ಥಾನದ ಮುಕ್ತೇಸರಾದ ಶ್ರೀ ಸುರೇಂದ್ರ ಶೆಟ್ಟಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಯಾಕೂಬ್ ಖಾದರ್ ಗುಲ್ವಾಡಿ, ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಫ್ರಾಂಕಿ ಡಿಸೋಜ, ಉಡುಪಿ ಜಿಲ್ಲಾಸ್ಪತ್ರೆ ಮುಖ್ಯಸ್ಥರಾದ ಡಾ.ವೀಣಾ ಕುಮಾರಿ ಭಾಗವಹಿಸಲಿದ್ದಾರೆ.
ರಕ್ತದಾನಿಳಾದ ದಿಶಾನ್ ಪೂಜಾರಿ, ಶಾಂತರಾಮ್ ಮೊಗವೀರ, ಝಾಕೀರ್ ಹುಸೈನ್, ವಿನುತಾ ಕಿರಣ್, ಶ್ರೀನಿವಾಸ್ ಪ್ರಸಾದ್ ಮಯ್ಯ, ಜಯರಾಜ್ ಸಾಲಿಯಾನ್, ಗುರುಚರಣ್ ಗಂಗೊಳ್ಳಿ, ನಿತ್ಯಾನಂದ್ ಅಮೀನ್, ಚೇತನ್ ಶಂಕರಪುರ, ಅಬ್ದುಲ್ ಹಮೀದ್ ಉಚ್ಚಿಲ ಇವರಿಗೆ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.