ಮಣಿಪಾಲ: ಅಪಾರ್ಟ್‌ಮೆಂಟ್‌ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ; ಪೊಲೀಸರ ದಾಳಿ, ಓರ್ವನ ಬಂಧನ: ಇನ್ನೊಬ್ಬ ಆರೋಪಿ ಸ್ಥಳದಿಂದ ಪರಾರಿ

ಮಣಿಪಾಲ: ಅಪಾರ್ಟ್‌ಮೆಂಟ್‌ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ; ಪೊಲೀಸರ ದಾಳಿ, ಓರ್ವನ ಬಂಧನ: ಇನ್ನೊಬ್ಬ ಆರೋಪಿ ಸ್ಥಳದಿಂದ ಪರಾರಿ

ಉಡುಪಿ: ಮಣಿಪಾಲದ ಈಶ್ವರನಗರದ 20ನೇ ಕ್ರಾಸ್‌ ನ ಬಳಿ ಇರುವ ಅಪಾರ್ಟ್‌ಮೆಂಟ್‌ ಒಂದರ ಮೊದಲನೇ ಮಹಡಿಯಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. 

ಬಂಧಿತ ಆರೋಪಿಯನ್ನು ಹೊನ್ನಾವರ ತಾಲೂಕಿನ ಜಳವಳ್ಳಿ ಗ್ರಾಮದ ಗಣೇಶ್ ಗಣಪ ನಾಯ್ಕ್ ಎಂದು ಗುರುತಿಸಲಾಗಿದೆ. ಈತ ಅಪಾರ್ಟ್ ಮೆಂಟ್ ನ ರೂಮ್‌ 103 ರಲ್ಲಿ ಮಹಿಳೆಯನ್ನು ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದನು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇನ್ನೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.  ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article