
ಮೀನುಗಾರಿಕೆಗೆ ತೆರಳಿದ್ದ ವೇಳೆ ಮೃತಪಟ್ಟ ಪಿತ್ರೋಡಿಯ ನೀಲಾಧರವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಹೇಳಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
Saturday, July 12, 2025
ಕಾಪು: ಶುಕ್ರವಾರ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ದೋಣಿ ಮಗುಚಿ ಮೃತಪಟ್ಟ ಉದ್ಯಾವರ ಗ್ರಾಮದ ಪಿತ್ರೋಡಿಯ ಮೀನುಗಾರ ನೀಲಾಧರ ಜಿ. ತಿಂಗಳಾಯ ಅವರ ಮನೆಗೆ ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಮೀನುಗಾರಿಕಾ ಇಲಾಖೆ ಸಚಿವರಾದ ಮಾಂಕಾಳ ವೈದ್ಯರಿಗೆ ನಡೆದ ಘಟನೆಯ ಬಗ್ಗೆ ಗಮನಕ್ಕೆ ತಂದು ತಕ್ಷಣ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ 10 ಲಕ್ಷ ಪರಿಹಾರವನ್ನು ಒದಗಿಸುವುದಾಗಿ ಶಾಸಕರು ತಿಳಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಗ್ರಾಮ ಪಂಚಾಯತ್ ಸದಸ್ಯರಾದ ಚೇತನ್ ಪಿತ್ರೋಡಿ, ರೇಖಾ ಶಂಕರ್, ಪ್ರಮೀಳಾ, ಸ್ಥಳೀಯರಾದ ಸತೀಶ್ ಉದ್ಯಾವರ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.