ಮಲ್ಪೆ ಕೊಳ ₹ 25 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ ಕೊಳ ₹ 25 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಉಡುಪಿ ನಗರಸಭೆಯ ಕೊಳ ವಾರ್ಡಿನಲ್ಲಿ ನಗರಸಭೆಯ ಅನುದಾನದಿಂದ ₹25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀರಾಮ 1 ನೇ  ಅಡ್ಡ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಕೊಳ ವಾರ್ಡಿನ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಶ್ರೀರಾಮ ರಸ್ತೆಯ ಕಾಂಕ್ರೀಟಿಕರಣಕ್ಕೆ ನಗರಸಭೆ ಮೂಲಕ ಅನುದಾನ ಒದಗಿಸಿ ಚಾಲನೆ ನೀಡಲಾಗಿದ್ದು, ನಗರಸಭಾ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸುಂದರ ಕಲ್ಮಾಡಿ,  ನಗರಸಭಾ ಸದಸ್ಯರಾದ ಶ್ರೀಮತಿ ಎಡ್ಲಿನ್ ಕರ್ಕಡ, ಬಾಲಕರ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಸತೀಶ್, ಸ್ಥಳೀಯ ಮುಖಂಡರಾದ ಶ್ರೀ ಪಾಂಡುರಂಗ ಮಲ್ಪೆ,  ಶ್ರೀ ಮಂಜು ಕೊಳ, ಶ್ರೀ ರವಿ ಸಾಲ್ಯಾನ್ , ಶ್ರೀ ಯಶವಂತ,  ಶ್ರೀ ಶರತ್, ಶ್ರೀ ಶಂಕರ ಸುವರ್ಣ, ಶ್ರೀ  ದಿನೇಶ್ ಕೊಳ, ಶ್ರೀದೇವದಾಸ್ ಸುವರ್ಣ, ಶ್ರೀ ಸುಮಂತ ಕೊಳ ಮೊದಲಾದವರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article