ಕಾಪು; ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ: ಯುವಕ ಮೃತ್ಯು

ಕಾಪು; ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ: ಯುವಕ ಮೃತ್ಯು

ಕಾಪು: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ K1 ಹೋಟೆಲಿನ ಬಳಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.

ಮೃತ ಯುವಕನನ್ನು ಕೊಪ್ಪಳದ ಅಮರೇಶ್ ಎಂದು ಗುರುತಿಸಲಾಗಿದೆ. K1 ಹೋಟೆಲಿನ ಬಳಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರಿನಿಂದ ಉಡುಪಿಯ ಕಡೆ ಹೋಗುತ್ತಿದ್ದ ಖಾಸಗಿ ಬಸ್ ಆನಂದ್ ಡಿಕ್ಕಿ ಹೊಡೆದಿದ್ದು, ಈ ವೇಳೆ ಅಮರೇಶ್ ಗಂಭೀರವಾಗಿ ಗಾಯಗೊಂಡಿದ್ದರು.

ಈ ವೇಳೆ ಯುವಕನನ್ನು ಸಾಮಾಜಿಕ ಕಾರ್ಯಕರ್ತ ಉಚ್ಚಿಲದ ಜಲಾಲುದ್ದೀನ್(ಜಲ್ಲು ಫ್ರೂಟ್ಸ್) ಹಾಗು ಮೂಳೂರಿನ SDPI ಅಂಬ್ಯುಲೆನ್ಸ್ ಚಾಲಕ ಹಮೀದ್ ಆಸ್ಪತ್ರೆಗೆ ಸಾಗಿಸಲು ಮುಂದಾಗುತ್ತಿದ್ದಂತೆಯೇ ಯುವಕ ಮೃತಪಟ್ಟಿದ್ದಾನೆ. ಮೃತದೇಹವನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲಾಗಿದೆ. 

Ads on article

Advertise in articles 1

advertising articles 2

Advertise under the article