
ಧರ್ಮಸ್ಥಳ; ಬಂಧಿತ ಸಾಕ್ಷಿ ದೂರುದಾರ 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ
Saturday, August 23, 2025
ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪಕ್ಕೆ ಸಂಬಂಧಿಸಿ ಸಾಕ್ಷಿದಾರನಾಗಿ ಬಂದಿದ್ದ ಅನಾಮಿಕ ಮಾಸ್ಕ್ಮ್ಯಾನ್ ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮುಸುಕುಧಾರಿಯಾಗಿ ಎಂಟ್ರಿಯಾಗಿದ್ದ ಸಾಕ್ಷಿಧಾರನನ್ನು ಬೆಳ್ತಂಗಡಿ ನ್ಯಾಯಾಲಯ 10 ದಿನ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಸತತ ವಿಚಾರಣೆ ನಡೆಸಿದ್ದ ಎಸ್‌ಐಟಿ ಪೊಲೀಸರು (SIT Police) ಇಂದು ಬೆಳಗ್ಗೆ ಚಿನ್ನಯ್ಯನನ್ನು ಬಂಧಿಸಿದ್ದರು.
ಬಂಧನ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಸಿದ ಷಡ್ಯಂತ್ರದಲ್ಲಿ ಈತ ಭಾಗಿಯಾಗಿರುವ ಕಾರಣ ಎಸ್‌ಐಟಿ ಪೊಲೀಸರು ವಶಕ್ಕೆ ಕೇಳಿದ್ದರು.
ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದೆ.