ಆರ್​ಎಸ್​ಎಸ್ ಗೀತೆ ಹಾಡಿದ ಡಿಕೆಶಿ ನಡೆಗೆ ಕಾಂಗ್ರೆಸ್ಸಿನೊಳಗೆ ಅಸಮಾಧಾನ; ರಾಜಣ್ಣ, ಪ್ರಿಯಾಂಕ್ ಖರ್ಗೆ ಹೇಳಿದ್ದೇನು...?

ಆರ್​ಎಸ್​ಎಸ್ ಗೀತೆ ಹಾಡಿದ ಡಿಕೆಶಿ ನಡೆಗೆ ಕಾಂಗ್ರೆಸ್ಸಿನೊಳಗೆ ಅಸಮಾಧಾನ; ರಾಜಣ್ಣ, ಪ್ರಿಯಾಂಕ್ ಖರ್ಗೆ ಹೇಳಿದ್ದೇನು...?

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಆರ್​​ಸಿಬಿ ವಿಜಯೋತ್ಸವ ಕಾಲ್ತುಳಿತ ಘಟನೆ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ‘ನಮಸ್ತೇ ಸದಾ ವತ್ಸಲೇ’ ಎಂದು ಆರ್​​ಎಸ್​ಎಸ್ ಗೀತೆ (RSS Song) ಹಾಡಿರುವುದು ಈಗ ಕಾಂಗ್ರೆಸ್ ಆಂತರಿಕ ವಲಯದಲ್ಲಿ ತೀವ್ರ ಸಂಘರ್ಷಕ್ಕೆ ಕಾರಣವಾಗಿದೆ. 

ಡಿಕೆ ಶಿವಕುಮಾರ್ ಅವರ ಈ ನಡೆಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಸಿಡಿಮಿಡಿಗೊಂಡಿದ್ದಾರೆ. ಅವರು ಏನು ಬೇಕಾದರೂ ಮಾಡಬಹುದು ಎಂದಿದ್ದಾರೆ. ಈ ಮೂಲಕ ರಾಜಣ್ಣರ ಅಸಮಾಧಾನದ ಹೊಗೆ ಎದ್ದಿದೆ. ಇಷ್ಟಕ್ಕೆ ಸುಮ್ಮನಾಗದ ರಾಜಣ್ಣ, ಡಿಕೆಶಿಯ ಅನೇಕ ಕಾರ್ಯಕ್ರಮಗಳನ್ನು ನೆನಪಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಕೂಡ ಟ್ವೀಟ್ ಮಾಡಿದ್ದು, ಆರ್​​ಎಸ್​​ಎಸ್​​ಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು ಎಂದು ಬರೆದುಕೊಂಡಿದ್ದಾರೆ.

ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ ‘‘ಆರ್​ಎಸ್​ಎಸ್​​ಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು’’ ಎಂಬ ಪ್ರತಿಜ್ಞೆ ಕೈಗೊಳ್ಳಬೇಕು. ಜನಾಂಗೀಯ ದ್ವೇಷ, ವರ್ಣಾಶ್ರಮದ ಕ್ರೌರ್ಯಗಳನ್ನು ಒಳಗೊಂಡ ನಾಜಿವಾದ, ಮನುವಾದಗಳನ್ನೇ ನರ ನಾಡಿ, ರಕ್ತಗಳಲ್ಲಿ ಪ್ರವಾಹಿಸಿಕೊಂಡಿರುವ RSS ಎಂಬ ವಿಷಕಾರಿ ಸಂಘಟನೆಯನ್ನು ಕಾಂಗ್ರೆಸ್ ಪಕ್ಷವು ಎಂದಿಗೂ ಶತ್ರುವಾಗಿಯೇ ನೋಡುತ್ತದೆ. ಏಕೆಂದರೆ, ಆರ್​ಎಸ್​​ಎಸ್ ಸಂವಿಧಾನಕ್ಕೆ ಶತ್ರು, ಆರ್​ಎಸ್​​ಎಸ್ ಐಕ್ಯತೆಗೆ ಶತ್ರು, ಆರ್​ಎಸ್​​ಎಸ್ ರಾಷ್ಟ್ರಧ್ವಜಕ್ಕೆ ಶತ್ರು, ಆರ್​ಎಸ್​​ಎಸ್ ರಾಷ್ಟ್ರಗೀತೆಗೆ ಶತ್ರು, ಆರ್ಎಸ್ಎಸ್ ಏಕತೆಗೆ, ಸಾರ್ವಭೌಮತೆಗೆ ಶತ್ರು ಎಂದು ಪ್ರಿಯಾಂಕ್ ಖರ್ಗೆ ಬರೆದುಕೊಂಡಿದ್ದಾರೆ.

ಪ್ರಿಯಾಂಕ್ ಖರ್ಗೆ ಟ್ವೀಟ್ ನಲ್ಲಿ ಹೇಳಿದ್ದೇನು...?

ಹೀಗೆ ಕಾಂಗ್ರೆಸ್ ನಾಯಕರು ಆರ್​ಎಸ್​​ಎಸ್​ ವಿರುದ್ಧ ಖಂಡತುಂಡವಾಗಿ ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಡಿಕೆ ಶಿವಕುಮಾರ್ ಆರ್​ಎಸ್​​ಎಸ್ ಗೀತೆ ಉಲ್ಲೇಖಿಸಿದ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿರುವುದು ಚರ್ಚೆ ಹುಟ್ಟುಹಾಕಿದೆ. ‘‘ಬಿಜೆಪಿಗೆ ಹೋಗ್ತಾರಂತಲ್ಲ’’ ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದರೆ, ಡಿಕೆ ಸಂಸ್ಕೃತ ಪಂಡಿತರು ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಆರ್​ಎಸ್​ಎಸ್ ಎಂಬುದು ಬಿಜೆಪಿಯ ಸಂಸ್ಥೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಮತ್ತೊಂದೆಡೆ, ಕೆಲವು ಮಂದಿ ಕಾಂಗ್ರೆಸ್ ನಾಯಕರು ಡಿಕೆಶಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅನ್ಯಥಾ ಭಾವಿಸಬಾರದು ಎಂದಿದ್ದಾರೆ.

ಪ್ರತಿಪಕ್ಷ ಬಿಜೆಪಿ ಡಿಕೆ ಶಿವಕುಮಾರ್ ನಡೆಯನ್ನು ಸ್ವಾಗತಿಸಿದೆ. ಈ ಬಗ್ಗೆ ಮಾತನಾಡಿರುವ ಶಾಸಕ ಅಶ್ವತ್ಥ್ ನಾರಾಯಣ್, ಅವರ ಪಕ್ಷಕ್ಕೆ ತಿಳಿಸಿದಂತಾಗುತ್ತದೆ ಎಂದಿದ್ದಾರೆ.

Ads on article

Advertise in articles 1

advertising articles 2

Advertise under the article