ಕಣ್ಣೂರು ಆಂಗ್ಲ ಮಾಧ್ಯಮ ಶಾಲೆ-ಮಹಿಳ PU ಕಾಲೇಜುನಲ್ಲಿ79ನೇ ಸ್ವಾತಂತ್ರ್ಯ ದಿನಾಚರಣೆ
ಮಂಗಳೂರು: ಕಣ್ಣೂರು ಆಂಗ್ಲ ಮಾಧ್ಯಮ ಶಾಲೆ ಮತ್ತು ಮಹಿಳ PU ಕಾಲೇಜು ನಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲೆಯ ಟ್ರಸ್ಟಿಗಳಾದ B ಮುಹಮ್ಮದ್ ಹಾಜಿ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಂಗಳೂರು ಟೌನ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಶಿವಕುಮಾರ್ ಧ್ವಜಾರೋಹಣ ಗೈದು ಶಾಲಾ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಕೆಲವು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಪ್ರಸ್ತುತ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಯಿತು.
ಸಂಸ್ಥೆಯ ಕಾರ್ಯದರ್ಶಿಗಳಾದ ಸಿತಾರ್ ಅಬ್ದುಲ್ ಮಜೀದ್ ಹಾಜಿ ಪ್ರಾಸ್ತಾವಿಕ ಭಾಷಣ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ ವಿಷಲಾಕ್ಷ್ಮಿ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಉಮರಬ್ಬ, E.K ಟಿಂಬರ್ ಮಾಲಕರಾದ ರಫೀಕ್ ಮೊದಲಾದವರು ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯನಿ ಶಂಷಾದ್ ರವರು ಸ್ವಾಗತ ಕೋರಿದರು. ಶಾಲಾ ಸಂಚಾಲಕರಾದ ರಿಯಾಝ್ ಅಹ್ಮದ್ K B ಧನ್ಯವಾದ ಗೈದರು. ಶಾಲಾ ಅಧ್ಯಾಪಕಿಯಾದ ಜಯಲತಾ ಕಾರ್ಯಕ್ರಮ ನಿರೂಪಿಸಿದರು.