
ಕುಂದಾಪುರ: ಅಕ್ರಮವಾಗಿ ಮದ್ಯ ಮಾರಾಟ: ಆರೋಪಿಯ ಬಂಧನ, ಮದ್ಯ ವಶ
Thursday, August 28, 2025
ಉಡುಪಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ಶೇಷಾದ್ರಿ (43) ಬಂಧಿತ ಆರೋಪಿ. ಗಣೇಶ ಹಬ್ಬದ ಪ್ರಯುಕ್ತ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಆದರೂ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿ ಯಾವುದೇ ಪರವಾನಗಿ ಇಲ್ಲದೆ ಕುಂದಾಪುರ ತಾಲೂಕಿನ ಹೆಸ್ಕುತ್ತೂರು ಸಾನ್ವಿ ಕೋಳಿ ಫಾರ್ಮ್ ಸಮೀಪ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ 13,650 ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.