ಜಗಳ...ಜಗಳ..; ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಪರಾರಿಯಾದ ಹಂತಕ

ಜಗಳ...ಜಗಳ..; ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಪರಾರಿಯಾದ ಹಂತಕ

ನವದೆಹಲಿ: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ದೆಹಲಿಯ ಕರವಾಲ್‌ ನಗರದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಕಾರಣ ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಪತ್ನಿ ಜಯಶ್ರೀ (28), 5 ಮತ್ತು 7 ವರ್ಷದ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ವಿಧಿವಿಜ್ಞಾನ ತಂಡಗಳು ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿವೆ. ಮೃತದೇಹಗಳನ್ನು ಜಿಟಿಬಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಆರೋಪಿ ಪರಾರಿಯಾಗಿದ್ದು, ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ. ದಂಪತಿ ನಿತ್ಯ ಜಗಳವಾಡುತ್ತಿದ್ದರು ಎಂದು ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ.

ಬೆಳಗ್ಗೆ 6 ಗಂಟೆಗೆ ಘಟನೆಯ ಬಗ್ಗೆ ನಮಗೆ ತಿಳಿಯಿತು. ನಾವು ಬಾಗಿಲು ತೆರೆದಾಗ, ತಾಯಿ ಮತ್ತು ಇಬ್ಬರು ಹೆಣ್ಣುಮಕ್ಕಳು ಹಾಸಿಗೆಯ ಮೇಲೆ ಮೃತಪಟ್ಟಿರುವುದು ಕಂಡುಬಂತು. ಪತಿ-ಪತ್ನಿ ನಿತ್ಯ ಜಗಳವಾಡುತ್ತಿದ್ದರೆಂದು ನೆರೆಹೊರೆಯವರು ತಿಳಿಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article